ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏಕಾಏಕಿ ಹೆಚ್ಚಳ ಮಾಡಿದ ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆಂದು ನಳಿನ್ ಕುಮಾರ್ ಕಟೀಲ್ ವಾಗ್ದಾಳಿ.

95.4K Views 17 Jun 2024

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏಕಾಏಕಿ ಶೇ.4ರಷ್ಟು ಹೆಚ್ಚಿಸುವ ಮೂಲಕ ತನ್ನ ಜನವಿರೋಧಿ ನೀತಿಯನ್ನು ಮತ್ತೆ ಪ್ರದರ್ಶಿಸಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಮತ್ತು ಸಚಿವರುಗಳ ನಡೆಸಿದ
ಭ್ರಷ್ಟಾಚಾರದಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದ್ದು ಈಗ ತೆರಿಗೆ ಹೆಚ್ಳಳ ಮಾಡುವ ಮೂಲಕ ಜನತೆಗೆ ಶಾಕ್ ನೀಡಿದೆ ಎಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ.
ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ವಿದ್ಯುತ್ ದರ, ಮುದ್ರಾಂಕ ಶುಲ್ಕ ಸಹಿತ ಎಲ್ಲ ರೀತಿಯ ಶುಲ್ಕಗಳನ್ನು ಏರಿಸಿ ಜನರಿಗೆ ಅನ್ಯಾಯ ಮಾಡಿದೆ. ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿರುವುದರಿಂದ ಸಾಗಾಟ ವೆಚ್ಚ ಹೆಚ್ಚಳವಾಗಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಇದರಿಂದ ರಾಜ್ಯದ ಜನತೆ ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ಇನ್ನೊಂದೆಡೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಜನತೆ ಆತಂಕದಲ್ಲಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ರಾಜ್ಯಕ್ಕೆ ಉಳಿಗಾಲವಿಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದು ನಳಿನ್‌ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top