ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಯೋಗಗುರು ಎಂ.ಜಗದೀಶ್ ಶೆಟ್ಟಿ ಬಿಜೈ ಇವರ ನೇತೃತ್ವದಲ್ಲಿ ಕೋಡಿಕಲ್ ಗುರುನಗರದ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಮಂದಿರ (ಎಸ್‌ಎನ್‌ಡಿಪಿ)ದಲ್ಲಿ ವಿಶ್ವ ಯೋಗ ದಿನಾಚರಣೆ ನಡೆಯಿತು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮ ಉದ್ಘಾಟಿಸಿದರು. ಋಷಿ ಪರಂಪರೆಯಿಂದ ಪರಿಚಿತವಾದ ಯೋಗ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನದಿಂದ ಇಡೀ ವಿಶ್ವಕ್ಕೆ ಪಸರಿಸಿದೆ. ನಿರಂತರ ಯೋಗಾಭ್ಯಾಸದಿಂದ ಬದುಕಿಗೆ ಸ್ಪೂರ್ತಿ ದೊರೆಯುತ್ತದೆ ಎಂದು ಅವರು ಹೇಳಿದರು.
ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್, ನಿವೃತ್ತ ಅಪರ ಜಿಲ್ಲಾಧಿಕಾರಿ ಎಸ್.ಎ.ಪ್ರಭಾಕರ ಶರ್ಮ, ಕೋಡಿಕಲ್ ಎಸ್‌ಎನ್‌ಡಿಪಿ ಮಂದಿರದ ಅಧ್ಯಕ್ಷ ಪದ್ಮನಾಭ ಕಾರ್ನಾಡ್, ಕಾರ್ಪೋರೇಟರ್‌ಗಳಾದ ಕಿರಣ್ ಕೋಡಿಕಲ್, ಮನೋಜ್ ಕೋಡಿಕಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ರೆಡ್ ಕ್ರಾಸ್‌ನ ಖಜಾಂಚಿ ಮೋಹನ್ ಶೆಟ್ಟಿ, ಆಡಳಿತ ಮಂಡಳಿ ನಿರ್ದೇಶಕರಾದ ಡಾ.ಸುಮನ ಬೋಳಾರ್, ಗುರುದತ್ ನಾಯಕ್, ಪಿ.ಬಿ.ಹರೀಶ್ ರೈ, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ ಉಪಸ್ಥಿತರಿದ್ದರು. ಯೋಗಗುರು ಎಂ.ಜಗದೀಶ್ ಶೆಟ್ಟಿ ಬಿಜೈ ಅವರನ್ನು ರೆಡ್‌ಕ್ರಾಸ್ ವತಿಯಿಂದ ಸನ್ಮಾನಿಸಲಾಯಿತು. ಡಾ.ಉಮ್ಮಪ್ಪ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.


























































































































































































