ರೆl ಹರ್ಮನ್ ಮೊಗ್ಲಿಂಗ್ 1843 ರ ಜುಲೈ 1 ರಂದು ಪ್ರಕಟಣೆ ಆರಂಭಿಸಿದ ‘ಮಂಗಳೂರ ಸಮಾಚಾರ’ಕ್ಕೆ ಕನ್ನಡದ ಮೊದಲ ಪತ್ರಿಕೆ ಎಂಬ ಹೆಗ್ಗಳಿಕೆ. ನಿನ್ನೆ ‘ಮಂಗಳೂರ ಸಮಾಚಾರ’ ಪ್ರಕಟವಾಗುತ್ತಿದ್ದ ನೆಲದಲ್ಲಿ (ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಆವರಣದಲ್ಲಿರುವ ರೆl ಹರ್ಮನ್ ಫ್ರೆಡ್ರಿಕ್ ಮೊಗ್ಲಿಂಗ್ ಅವರ ಪುತ್ಥಳಿಯ ಮುಂದೆ) ಪತ್ರಿಕಾ ದಿನಾಚರಣೆ ಮತ್ತು ಮೊಗ್ಲಿಂಗ್ ಸ್ಮರಣೆ.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್., ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನಿ ಅಲ್ವಾರಿಸ್, ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ಡಾl ಎಚ್.ಎಮ್. ವಾಟ್ಸನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ ಕಾರ್ಯಕ್ರಮ ನಿರ್ವಹಿಸಿದರು, ಕಾರ್ಯದರ್ಶಿ ಗಿರಿಧರ್ ಶೆಟ್ಟಿ ವಂದಿಸಿದರು.


























































































































































































