ಮಂಗಳೂರು : ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಖ್ಯಾತ ಮಕ್ಕಳ ತಜ್ಞ, ದ.ಕ.ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಹಾಗೂ ಹೊರನಾಡ ಕನ್ನಡ ರತ್ನ ಪ್ರಶಸ್ತಿ ಪುರಸ್ಕೃತ ಡಾ.ಸುಧಾಕರ ಶೆಟ್ಟಿ ಅವರಿಂದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣಾ ಶಿಬಿರವು ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಕ್ಷಯಧಾಮದಲ್ಲಿ ಜುಲೈ 14 ರಂದು ನಡೆಯಿತು.

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ12 ರ ವರೆಗೆ ನಡೆದ ಈ ಶಿಬಿರದ ಪ್ರಯೋಜನವನ್ನು ಕಲ್ಲಬೆಟ್ಟು ಮತ್ತು ಆಸುಪಾಸಿನ ಗ್ರಾಮಗಳ ಮಕ್ಕಳು ಪಡೆದುಕೊಂಡರೆಂದು ಸಂಘದ ಅಧ್ಯಕ್ಷ ಸುರೇಶ್ ಕೋಟ್ಯಾನ್, ಉಪಾಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿತಾ ಆರ್.ಶೆಟ್ಟಿ ಅವರು ತಿಳಿಸಿದ್ದಾರೆ .ಈ ಶಿಬಿರಕ್ಕೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಸಹಕಾರವಿತ್ತು.




























































































































































































