ಸೆ.20 ರಂದು ಡಾ.ಗುರುಕಿರಣ್ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

113.2K Views 17 Sep 2024

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಸೆ. 20ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ, ಬೆಂಗಳೂರು ವಿ.ವಿ. ಗೌರವ ಡಾಕ್ಟರೇಟ್ ಪುರಸ್ಕೃತರಾದ ಗುರುಕಿರಣ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.
ಹಿರಿಯ ಛಾಯಾಗ್ರಾಹಕ ಯಜ್ಞ ಮಂಗಳೂರು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

Scroll to Top