ಯಕ್ಷಾಂಗಣದ ತಾಳಮದ್ದಳೆ ಸಪ್ತಾಹ 2024 – ಸಂಘಟನಾ ಪರ್ವ

117.9K Views 13 Nov 2024

ಮಂಗಳೂರು: ‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ಮತ್ತು ಕರ್ನಾಟಕ ಯಕ್ಷಭಾರತಿ ಪುತ್ತೂರು ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ನಡೆಸಲ್ಪಡುವ ಹನ್ನೆರಡನೇ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ¸ ಸಪ್ತಾಹ – 2024’ ದ್ವಾದಶ ಸರಣಿಯು ಇದೇ 2024 ನವೆಂಬರ್ 11 ರಿಂದ 17ರ ವರೆಗೆ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ಜರಗಲಿದೆ. ‘ಸಂಘಟನಾ ಪರ್ವ’ ಎಂಬ ಹೆಸರಿನಲ್ಲಿ ಜಿಲ್ಲೆಯ ವಿವಿಧ ಯಕ್ಷಗಾನ ಸಂಘಗಳ ಸಹಕಾರದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ನವೆಂಬರ 11 ರಿಂದ ಕ್ರಮವಾಗಿ ಹವ್ಯಾಸಿ ಬಳಗ ಕದ್ರಿ (ರಾಜಾ ದಂಡಕ), ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘ ಬೆಟ್ಟಂಪಾಡಿ (ಕಚ – ದೇವಯಾನಿ), ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘ, ಉಪ್ಪಿನಂಗಡಿ (ಸೈಂಧವ ವಧೆ), ಶ್ರೀ ವಾಣೀವಿಲಾಸ ಯಕ್ಷ ಬಳಗ, ಕಟೀಲು (ತ್ರಿಶಂಕು ಸ್ವರ್ಗ), ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ (ಬಿನದ ದಾಂಪತ್ಯ); ಶ್ರೀ ಚಾಮುಂಡೇಶ್ವರೀ ಯಕ್ಷಕೂಟ ಕಣಿಯೂರು ಕನ್ಯಾನ (ಸುದರ್ಶನೋಪಖ್ಯಾನ); ಕರ್ನಾಟಕ ಯಕ್ಷಭಾರತಿ ಪುತ್ತೂರು (ಸತೀ ಶಕುಂತಲೆ) ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಕಾರದಲ್ಲಿ ‘ರೆಂಜೆ ಬನೊತ ಲೆಕ್ಯೆಸಿರಿ’ ಹೀಗೆ ವಿನೂತನ ಪ್ರಸಂಗಗಳು ಪ್ರಸ್ತುತಿಗೊಳ್ಳಲಿವೆ.

Read More News

Scroll to Top