ಜ. 5, 2025 ರಂದು ಮಂಗಳೂರು ಧರ್ಮಪ್ರಾಂತದ ಪರಮ ಪವಿತ್ರ ಪ್ರಸಾದ ಮೆರವಣಿಗೆ. ಈ ಬಗ್ಗೆ ಬಿಷಪ್ ಹೌಸ್ ನಲ್ಲಿ ನಡೆಯಿತು ಪೂರ್ವಭಾವಿ ಸಭೆ.

108.4K Views 19 Nov 2024

ಮಂಗಳೂರು ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ ತಾ. 05-01-2025 ರಂದು ನಡೆಯಲಿದ್ದು, ಇದರ ಬಗ್ಗೆ ಪೂರ್ವಬಾವಿ ಸಭೆಯನ್ನು ಬಿಷಪ್ ಹೌಸ್‌ನಲ್ಲಿ ನಡೆಸಲಾಯಿತು. ಈ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂ| ಡಾ| ಪೀಟರ್ ಪಾವ್ಲ್ ಸಲ್ಡಾನ ವಹಿಸಿ, ಕಾರ್ಯಕ್ರಮದ ಬಗ್ಗೆ ರೂಪು ರೇಖೆಯನ್ನು ವಿವರಿಸಿದರು. ಈ ಸಭೆಯಲ್ಲಿ ಧರ್ಮಪ್ರಾತ್ಯದ ಶ್ರೇಷ್ಠ ಗುರು ವಂ| ಪಾ| ಮ್ಯಾಕ್ಸಿಂ ನೊರೊನ್ಹಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ರೋಯ್ ಕ್ಯಾಸ್ಟಲಿನೋ, ಕಥೋಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿ’ಸೋಜಾ ಮುಂತಾದವರು ಉಪಸ್ಥಿತರಿದ್ದರು.
ರೋಯ್ ಕ್ಯಾಸ್ಟಲಿನೋ ಮೆರವಣಿಗೆಯ ಬಗ್ಗೆ ಸಂಸೇವಕರ ಸೇವೆಯ ಬಗ್ಗೆ ರೂಪು ರೇಖೆ ನೀಡಿ ಪ್ರತಿ ಚರ್ಚಿನ ಸ್ವಯಂ ಸೇವಕರು ಅವರು ನಿಲ್ಲುವ ಸ್ಥಳವನ್ನು ತಿಳಿಸಿದರು.
ಈ ಪರಮ ಪ್ರಸಾದದ ಮೆರವಣಿಗೆಯು ಆ ದಿನ ಸಂಜೆ 3 ಗಂಟೆಗೆ ಮಿಲಾಗ್ರಿಸ್ ಚರ್ಚಿನಲ್ಲಿ ಬಲಿಪೂಜೆಯೊಂದಿಗೆ ಪ್ರಾರಂಭಗೊಳ್ಳಲಿದ್ದು 4.30 ಕ್ಕೆ ಮಿಲಾಗ್ರಿಸ್ ಚರ್ಚಿನಿಂದ ಪಾಂಡೇಶ್ವರದ ರೊಸಾರಿಯೊ ಚರ್ಚಿಗೆ ಮೆರವಣಿಗೆ ಮೂಲಕ ಪರಮ ಪ್ರಸಾದ ಕೊಂಡೊಯ್ಯಲಾಗುವುದು. ಚರ್ಚಿನ ತೆರೆದ ಮೈದಾನದಲ್ಲಿ ಪ್ರವಚನ ಹಾಗೂ ಇತರ ಕಾರ್ಯಕ್ರಮಗಳು ಜರಗಲಿರುವುದು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top