ಮಂಗಳೂರಲ್ಲಿ ಉಚ್ಚ ನ್ಯಾಯಾಲಯದ ಪೀಠ ಸ್ಥಾಪನೆ ಮಾಡುವ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ.

97K Views 18 Dec 2024

ಬೆಂಗಳೂರು: ಮಂಗಳೂರಿನಲ್ಲಿ ಉಚ್ಚ ನ್ಯಾಯಲಯದ ಪೀಠ ಸ್ಥಾಪನೆ ಮಾಡುವ ಬಗ್ಗೆ ಹೋರಾಟ ಸಮಿತಿಯ ಸಂಚಾಲಕರರು ಹಾಗೂ ವಿಧಾನ ಪರಿಷತ್ ನ ಸದಸ್ಯರಾದ ಐವನ್ ಡಿ ಸೋಜರವರ ನೇತ್ರತ್ವದಲ್ಲಿ ವಿಧಾನ ಸಭೆಯ ಸಭಾದಕ್ಷರಾದ ಯು ಟಿ ಖಾದರ್ ರವರ ಸಮುಕ್ಷಮದಲ್ಲಿ ಮುಖ್ಯಮಂತ್ರಿಯವರಿಗೆ ಮಂಗಳೂರು ವಕೀಲರ ಸಂಘದ ಪರವಾಗಿ ಮನವಿಯನ್ನು ಸಲ್ಲಿಸಲಾಯಿತು.

ಈ ಬಗ್ಗೆ ಸಂಘದ ಅಧ್ಯಕ್ಷರಾದ ಎಚ್ ವಿ ರಾಘವೇಂದ್ರ ಮತ್ತು ಹಿರಿಯ ವಕೀಲರಾದ ಎಂ.ಪಿ ನೊರೂಂನ್ಹ ರವರು ಕರಾವಳಿಯಲ್ಲಿ ಉಚ್ಛ ನ್ಯಾಯಲಯದ ಸಂಚಾರಿ ಪೀಠ ವನ್ನು ಜರೂರಾಗಿ ಸ್ಥಾಪಿಸುವ ಬಗ್ಗೆ ಮನವರಿಕೆ ಮಾಡಿದರು . ಈ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಕಾನೂನು ಸಚಿವರು ಉಚ್ಚ ನ್ಯಾಯಲಯದ ನ್ಯಾಯಾಧೀಶರೊಂದಿಗೆ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿರುತಾರೆ. ನಿಯೋಗದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಕಿಶೋರ್ ಕುಮಾರ್,. ಮಂಜುನಾಥ್ ಭಂಡಾರಿ, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ವಕೀಲರಾದ ಮೋನಪ್ಪ ಭಂಡಾರಿ, ಹಾಗೂ ಹಿರಿಯ ವಕೀಲರಾದ ಟಿ. ನಾರಾಯಣ ಪೂಜಾರಿ, ಯಶವಂತ ಮರೋಳಿ,ಉಪಾಧ್ಯಕ್ಷರಾದ ಸುಜಿತ್ ಕುಮಾರ್,ಬ0ಟ್ವಾಳ ವಕೀಲರ ಸಂಘದ ಅಧ್ಯಕ್ಷರಾದ ರಿಚರ್ಡ್ ಡಿ ಕೊಸ್ತಾ ಶ್ರೀಮತಿ ಶಾಲಿನಿ, ಶ್ರೀಮತಿ ಸುಮನಾ ಶರಣ್, ಸಂತೋಷ್ ಕುಮಾರ್, ದಿನಕರ್ ಶೆಟ್ಟಿ, ರಾಘವೇಂದ್ರ ರಾವ್, ಪ್ರಮೋದ್ ಕೆರ್ವಾಶೆ, ಜಗದೀಶ್ ಕೆ ಆರ್, ವಿಜಯ್ ಮಹಾತೇಶ್ ಸತೀಶ್ ಕುಮಾರ್, ವೀರೇಂದ್ರ ಸಿದ್ದಕಟ್ಟೆ ಉಪಸ್ಥಿತರಿದ್ದರು

Read More News

ತುಳುವಿಗೆ ದ್ವಿತೀಯ ಅಧಿಕೃತ ಭಾಷಾ ಸ್ಥಾನಮಾನ: ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ನಾಯಕರಿಗೆ ಅನಿವಾಸಿ ತುಳುವರ ಪರವಾಗಿ ಭಾರತೀಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಕೇಂದ್ರ, ಅಬುಧಾಬಿಯ ನಿಕಟಪೂರ್ವ ಅಧ್ಯಕ್ಷ ಮಿತ್ರಂಪಾಡಿ ಜಯರಾಮ ರೈ ಅಭಿನಂದನೆ

MP MLA’S NEWS 🔴ಬ್ರೇಕಿಂಗ್ ನ್ಯೂಸ್ | ಎಕ್ಸ್‌ಕ್ಲೂಸಿವ್ ಸ್ಪಾಟ್ ರಿಪೋರ್ಟ್. ಪ್ರಜಾ ಸೌಧದ ಐತಿಹಾಸಿಕ ಪತ್ರಿಕಾಗೋಷ್ಠಿಯಲ್ಲಿ MP MLA’S NEWS ಭಾಗಿ: ₹30,000 ಕೋಟಿ ಗುತ್ತಿಗೆದಾರರ ಬಾಕಿ ಪ್ರಶ್ನೆಗೆ ಡಿಸಿಎಂ ಪರಮೇಶ್ವರ್ ಹಿಂದೇಟು, ಹೋಟೆಲ್ ಬಂದ್ ಪ್ರಶ್ನೆಗೆ ಖಾದರ್ ನಿರ್ಲಕ್ಷ್ಯ!

Scroll to Top