ಕರಾವಳಿ ಉತ್ಸವ ಬ್ಯಾನರ್ ಬಿಡುಗಡೆ.

114.6K Views 20 Dec 2024

ಮಂಗಳೂರು:ಡಿಸೆಂಬರ್ 21 ರಿಂದ ಆರಂಭ ವಾಗುವ ಕರಾವಳಿ ಉತ್ಸವದ ಕುರಿತು ಜನರಿಗೆ ಮಾಹಿತಿ ನೀಡಲು ಖಾಸಗಿ ಬಸ್ ಗಳಲ್ಲಿ ಬ್ಯಾನರ್ ಅಳವಡಿಸುವ ಕಾರ್ಯಕ್ರಮಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಮಲಾಡ್ ಸ್ಟೇಟ್ ಬ್ಯಾಂಕ್ ಬಳಿ ಚಾಲನೆ ನೀಡಿದರು.


ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿರುವ ಕರಾವಳಿ ಉತ್ಸವಕ್ಕೆ ಹೆಚ್ಚಿನ ಪ್ರಚಾರ ನೀಡಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ದಕ್ಷಿಣ ಕನ್ನಡ ಬಸ್ ಮಾಲೀಕರ ಸಂಘ ಈ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ ಅಧೀಕ್ಷಕ ರಾಕೇಶ್, ದಕ್ಷಿಣ ಕನ್ನಡ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳಾದ ದಿಲ್ ರಾಜ್ ಆಳ್ವ, ಅಬ್ದುಲ್ ರಝಕ್, ಶರತ್ ಮರೋಳಿ, ಜಯಶೀಲಾ ಅಡ್ಯ0ತ್ಯಾಯ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Read More News

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ, ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಅವರ ಪತ್ನಿ ಅಗಲಿಕೆ: ಮಂಗಳೂರಿನ ಹ್ಯಾಟ್ ಹಿಲ್ ನಲ್ಲಿ ಇಂದು ಬೆಳಿಗ್ಗೆ (ಅಕ್ಟೋಬರ್ 25) ಗಂಟೆ 10 ರಿಂದ 12ರವರೆಗೆ ಅಂತಿಮ ದರ್ಶನ ಮತ್ತು 12.30ಕ್ಕೆ ಕದ್ರಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ

Scroll to Top