ಬಂಟ್ವಾಳ ತಾಲೂಕಿನ ಪಂಚ ಗ್ಯಾರಂಟಿಗಳ ಅನುಷ್ಠಾನಗಳ ಸಭೆ

97.3K Views 7 Jan 2025

ಬಂಟ್ವಾಳ ತಾಲೂಕಿನ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯು ದಿನಾಂಕ 06-01-2025ರಂದು ತಾಲೂಕು ಪಂಚಾಯತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ವ್ಯಾಪ್ತಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರದ 10 ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜನೆಗೊಳಿಸಲು ಸಹಕರಿಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಅಧಿಕಾರಿ/ ಸಿಬ್ಬಂದಿಗಳನ್ನು ತಾಲೂಕು ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ವಹಿಸಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಚಿನ್ ಕುಮಾರ್, ಸಮಿತಿ ಸದಸ್ಯರು, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿಗಳು ಭಾಗವಹಿಸಿದ್ದರು.

Read More News

Scroll to Top