ಜ.10: ಡೊಂಗರಕೇರಿ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿ

104.3K Views 7 Jan 2025

ಮಂಗಳೂರು: “ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 10ರಂದು ಏಳನೇ ವರ್ಷದ ಏಕಾದಶಿಯನ್ನು ಅದ್ಧೂರಿಯಿಂದ ಆಚರಿಸಲಾಗುವುದು” ಎಂದು ದೇವಳದ ಮೆನೇಜಿಂಗ್ ಟ್ರಷ್ಟಿ ಪ್ರವೀಣ್ ನಾಗ್ವೇಕರ್ ಬೋಳಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.


“ಇಲ್ಲಿ ನಡೆಯುವ ಏಕಾದಶಿ ಕಾರ್ಯಕ್ರಮ ದೇವರ ಅಪ್ಪಣೆಯಂತೆ ನಡೆಯುತ್ತಿದ್ದು ಪ್ರತೀ ಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು. ಅಂದು ಲೋಕ ಕಲ್ಯಾಣಕ್ಕಾಗಿ ನಾಮತ್ರಯ ಮಹಾಮಂತ್ರ ಜಪಯಜ್ಞ, ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆಯನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಾಯಂಕಾಲ 4 ಗಂಟೆಗೆ ಡೊಂಗರಕೇರಿ ಕಟ್ಟೆಯಿಂದ ಪುಷ್ಪಯಾಗದ ಹೂವಿನ ವಿಶೇಷ ಮೆರವಣಿಗೆ ನಡೆಯಲಿದೆ” ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದ ಉಸ್ತುವಾರಿ ಗಣೇಶ್ ನಾಗ್ವೇಕರ್ ಬೋಳಾರ್ ಮಾತಾಡಿ “ಅಂದು ಬೆಳಗ್ಗೆ 7ರಿಂದ 8ರವರೆಗೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ, ಮಧ್ಯಾಹ್ನ 12ಕ್ಕೆ ಮಹಾಪೂಜೆ, 1ರಿಂದ 3ರವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 9ಕ್ಕೆ ದೀಪಾರಾಧನೆ ಮಹಾಪೂಜೆ ಬಳಿಕ 10 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ“ ಎಂದು ಹೇಳಿದರು.


ವೇದಿಕೆಯಲ್ಲಿ ವಿನಾಯಕ ಶೇಟ್, ಸಾಯಿದತ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಸಾವಯವ ಸಸ್ಯಗಳಿಂದ ಅಲಂಕಾರ!
ಜನರಲ್ಲಿ ಸಾವಯವ ಮತ್ತು ಆಯುರ್ವೇದ ಸಸ್ಯಗಳ ಬಳಕೆಯ ಬಗ್ಗೆ ಆಸಕ್ತಿ ಮೂಡಿಸಲು ಈ ಬಾರಿ ದೇವಳವನ್ನು ವಿಶೇಷವಾಗಿ ಸಾವಯವ ಸಸ್ಯಗಳಿಂದ ಅಲಂಕಾರ ಮಾಡಲಾಗಿದೆ. ಅದೇ ರೀತಿ ಭಕ್ತರಿಗೆ ಪ್ರಸಾದ ರೂಪದಲ್ಲಿ ಸಸ್ಯವನ್ನು ನೀಡಲು ದೇವಳದ ಆಡಳಿತ ಮಂಡಳಿ ನಿರ್ಧರಿಸಿದೆ. ಅಲಂಕಾರದಲ್ಲಿ ಪಾಲಕ್, ಹರಿವೆ, ರೆಡ್ ಬಾಸಿಲ್, ಗ್ರೀನ್ ಬಾಸಿಲ್ ಗಿಡಗಳನ್ನು ಬಳಸಲಾಗಿದೆ. ಸರಿಸುಮಾರು 10000ಕ್ಕೂ ಹೆಚ್ಚು ಗಿಡಗಳನ್ನು ಬೆಳೆಸಲಾಗಿದೆ. 8000 ತುಳಸಿ ಗಿಡಗಳನ್ನು ಭಕ್ತರಿಗೆ ನೀಡಲು ಬೆಳೆಸಲಾಗಿದೆ.

ಚಿತ್ರಗಳು:ಸತೀಶ್ ಕಾಪಿಕಾಡ್

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top