ಉದ್ಯಮಿ ಎಂ. ಅಶೋಕ ಶೇಟ್ ನಿಧನ.

108.4K Views 22 Jan 2025

ಮಂಗಳೂರು: ಶ್ವೇತಾ ಜುವೆಲ್ಲಸ್೯ ನ ಮಾಲಕ, ದೈವಜ್ಞ ಬ್ರಾಹ್ಮಣ ಸಮಾಜದ ಕ್ರಿಯಾಶೀಲ ವ್ಯಕ್ತಿತ್ವದ ಎಂ. ಅಶೋಕ್ ಶೇಟ್ (64) ಜನವರಿ 22 ರಂದು ಖಾಸಗಿ ಆಸ್ಪತ್ರೆ ಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಮೃತರು ಪತ್ನಿ,ಮೂವರು ಪುತ್ರಿಯರನ್ನು ಅಗಲಿದ್ದಾರೆ.


ಅಶೋಕ್ ಶೇಟ್ ಪ್ರಸ್ತುತ ಮಂಗಳೂರು ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಹಾಲಿ ಅಧ್ಯಕ್ಷರಾಗಿದ್ದರು. ದೈವಜ್ಞ ಯುವಕ ಮಂಡಳಿಯ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಸೇವಾ ಸಂಸ್ಥೆ, ದೈವಜ್ಞ ಬ್ರಾಹ್ಮಣ ಸಂಘ ಮುಂತಾದ ಅನೇಕ ಸಂಘ- ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ಮಂಗಳೂರು ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿಯ ಮುಖ್ಯ ಪ್ರವರ್ತಕರಾಗಿದ್ದ ಎಂ ಅಶೋಕ್ ಶೇಟ್ ರವರು ದೈವಜ್ಞ ಸೌರಭ ಪತ್ರಿಕೆಯ ಸಂಸ್ಥಾಪಕ ಪ್ರಕಾಶಕರಾಗಿದ್ದರು. ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಅವರು ಸ್ನೇಹಜೀವಿಯಾಗಿದ್ದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top