ಇದು ಬಡವರ, ಮಧ್ಯಮ ವರ್ಗ, ಮಹಿಳೆಯರು ಹಾಗೂ ರೈತರ ಪರವಾದ ಬಜೆಟ್ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

104.2K Views 1 Feb 2025

ಮಂಗಳೂರು, ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್,ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ಅದರಲ್ಲೂ ರೈತರಿಗೆ, ಯುವಕರಿಗೆ, ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಆದಾಯ ತೆರಿಗೆ ವ್ಯಾಪ್ತಿಯನ್ನು 12 ಲಕ್ಷಕ್ಕೆ ಏರಿಸಲಾಗಿದೆ. ಇದರಿಂದ ಮಧ್ಯಮ ವರ್ಗದ ಬಹಳಷ್ಟು ಅನುಕೂಲ ವಾಗಲಿದೆ. ಇದಕ್ಕಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಕೃಷಿ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮ. ಸರ್ಕಾರ ರಾಜ್ಯಗಳೊಂದಿಗೆ ಸಹಭಾಗಿತ್ವದಲ್ಲಿ 100 ಜಿಲ್ಲೆಗಳನ್ನು ಒಳಗೊಂಡಿರುವಂತೆ ಈ ಯೋಜನೆ ರೈತಾಪಿ ವರ್ಗಕ್ಕೆ ಬಹಳ ಅನುಕೂಲವಾಗಲಿದೆ ಎಂದು ಹೇಳಿದರು.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top