ಬಜೆಟ್ 2025-26 ಬಗ್ಗೆ ಕ್ಯಾಪ್ಟನ್ ಕಾರ್ಣಿಕ್ ಅಭಿಪ್ರಾಯ ಇಲ್ಲಿದೆ

100.1K Views 1 Feb 2025

1.ಆತ್ಮ ವಿಶ್ವಾಸದೊಂದಿಗೆ ನಮ್ಮ ದೇಶವನ್ನು ಆತ್ಮ ನಿರ್ಭರತೆಯತ್ತ ಕೊಂಡೊಯ್ಯುವ 2025-26 ರ ಬಜೆಟನ್ನು ನೀಡಿರುವ ಕೇಂದ್ರ ವಿತ್ತ ಮಂತ್ರಿ ಶ್ರೀಮತಿ ನಿರ್ಮಲ ಸೀತಾರಾಮನ್ ರನ್ನು ದೇಶದ ಸಮಸ್ತ ಜನತೆಯ ಪರವಾಗಿ ಅಭಿನಂದಿಸುತ್ತೇನೆ.


2.ಮಧ್ಯಮ ವರ್ಗದ ಹಿತಾಸಕ್ತಿಯನ್ನು ಪರಿಗಣಿಸಿ ತೆರಿಗೆಯನ್ನು ಸರಳೀಕರಿಸಿ 1 ಲಕ್ಷ ಕೋಟಿಗೂ ಹೆಚ್ಚಿನ ರಿಲೀಫ್ ನೀಡಿರುವ ಸ್ವಾಗತಾರ್ಹ ಬಜೆಟ್.
3.ಬದಲಾದ ವಿಶ್ವ ನಾಯಕತ್ವ, ಬದಲಾಗಬಹುದಾದ ವಿಶ್ವ ವ್ಯಾಪಾರದ ನಿಯಮಗಳು, ನಮ್ಮ ದೇಶದ ಹಿತಾಸಕ್ತಿಯನ್ನು ಕಾಪಾಡುವ ಅನಿವಾರ್ಯತೆಯನ್ನು ಗಮನದಲ್ಲಿ ಇರಿಸಿ ಆತ್ಮ ನಿರ್ಭರತೆಯತ್ತ ವಿಶೇಷ ಆದ್ಯತೆಯಿಂದ ಕೃಷಿ, ಶಿಕ್ಷಣ, ಸಂಶೋಧನೆ, ಕೌಶಲ್ಯ ಅಭಿವೃದ್ಧಿಯತ್ತ ಕೊಂಡೊಯ್ಯುವ ಪ್ರಗತಿಶೀಲ ಬಜೆಟ್.
5.2014ರಲ್ಲಿ ಕೇವಲ 2.5 ಲಕ್ಷಕ್ಕೆ ಸೀಮಿತವಾಗಿದ್ದ ಆದಾಯ ತೆರಿಗೆಯ ವ್ಯಾಪ್ತಿ ಯನ್ನು ಕೇವಲ 12 ವರ್ಷಗಳ ಅವಧಿಯಲ್ಲಿ 12ಲಕ್ಷ ಕ್ಕೆ (+ Rs75000/-) ಏರಿಸಿ ಮಧ್ಯಮ ವರ್ಗದ ಬಹು ವರ್ಷಗಳ ಕನಸನ್ನು ನನಸು ಗೊಳಿಸಿದ ಶ್ಲಾಘನೀಯ ಬಜೆಟ್.
6.ಪರೋಕ್ಷ ತೆರಿಗೆಗಳ ಇನ್ನಷ್ಟು ಸರಳಗೊಳಿಸುವ ಪ್ರಯತ್ನ ಇರುವ ಭವಿಷ್ಯದ ಸ್ಪಷ್ಟ ದೃಷ್ಟಿ ಕೋನವಿರುವ ಬಜೆಟ್. 7.ಸರಕಾರದ ಕೈಯಲ್ಲಿ ಹಣ ಇರಿಸಿ ದುಂದುವೆಚ್ಚ ಮಾಡುವುದಕ್ಕಿಂತ ಜನತೆಯ ಕೈಯಲ್ಲಿ ಹೆಚ್ಚು ಹಣವಿರುವಂತೆ ಮಾಡಿ ಉಳಿತಾಯ, ಹೂಡಿಕೆ ಹಾಗೂ ಅಗತ್ಯವಸ್ತುಗಳಿಗಾಗಿ ವೆಚ್ಚ ಮಾಡಲು ಅವಕಾಶ ನೀಡಿ ಆರ್ಥಿಕ ಪ್ರಗತಿಯನ್ನು ಪ್ರೋತ್ಸಾಹಿಸುವ ಆಶಾ ದಾಯಕ ಬಜೆಟ್.
-ಕ್ಯಾಪ್ಟನ್ ಗಣೇಶ್ ಕಾರ್ಣಿಕ್
ಮಾಜಿ ಶಾಸಕ
ವಿಧಾನ ಪರಿಷತ್ತು

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top