ಫೆ.9 ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

111.6K Views 7 Feb 2025

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಫೆ.9ರಂದು ಬೆಳಗ್ಗೆ 10ಕ್ಕೆ ನಗರದ ಮೋರ್ಗನ್ಸ್‌ಗೇಟ್
ಬಳಿಯ ಪಾಲೆಮಾರ್ ಗಾರ್ಡನ್‌ಮಲ್ಲಿ ನಡೆಯಲಿದೆ. ಮಾಜಿ ಮೇಯರ್, ಕಾರ್ಡೋಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ಇಂಡಿಯಾದ ಜನರಲ್ ಮ್ಯಾನೇಜರ್ ದಿವಾಕರ್ ಕದ್ರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 2024ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ
ಆಯ್ಕೆಯಾಗಿರುವ ಮನಪಾ ಕಾರ್ಪೋರೇಟರ್ ಗಣೇಶ್ ಕುಲಾಲ್ ಇವರಿಗೆ ಮಾಜಿ ಸಚಿವ ಕೃಷ್ಣ.ಜೆ.ಪಾಲೆಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ.


ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಅವರು ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಹಾಗೂ ಪ್ರೆಸ್ ಕ್ಲಬ್ ಸ್ಥಾಪಕ ಅಧ್ಯಕ್ಷ ಆನಂದ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಧರ್ಮದರ್ಶಿ ಹರಿಕೃಷ್ಣ ಪುನರೂರು ಮಾಲಕತ್ವದ ಸ್ಟೇಟ್ ಬ್ಯಾಂಕ್ ನಲ್ಲಿರುವ ಹೋಟೆಲ್ ಸ್ವಾಗತ್ ನ ಸಪ್ಲೈಯರ್, ಎಂಪಿ ಎಂಎಲ್ ಎ ನ್ಯೂಸ್ 11ನೇ ಸೌಹಾರ್ದ ಸಂಗಮದಲ್ಲಿ ಯುವರತ್ನ ಪ್ರಶಸ್ತಿ -2020 ಪುರಸ್ಕೃತ ಯುವ ಸಮಾಜ ಸೇವಕ ಅರುಣ್ ಶೆಟ್ಟಿ ಕೋಡಿಬೆಟ್ಟು, ಪೊಳಲಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ನೇತೃತ್ವ ದಲ್ಲಿ ದ.ಕ. ಜಿಲ್ಲಾ ಪ್ರಶಸ್ತಿ-2026 ಪ್ರಧಾನ.

ರಂಗಭೂಮಿ, ಚಲನಚಿತ್ರ ರಂಗದ ಅಭಿಜಾತ ಕಲಾವಿದ, ಎಸ್ ಡಿಸಿಸಿ ಬ್ಯಾಂಕ್ ನ ನಿವೃತ್ತ ಅಧಿಕಾರಿ, ರಂಗಭೂಷಣ ಲಕ್ಷ್ಮಣ್ ಕುಮಾರ್ ಮಲ್ಲೂರ್ ಅವರಿಗೆ ರಾಜ್ಯೋತ್ಸವದ ದಿನದಂದೇ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಸ್ಥಾಪಕತ್ವದ ರಂಗಚಾವಡಿ ಸಂಸ್ಥೆಯಿಂದ ಸುರತ್ಕಲ್ ಬಂಟರ ಭವನದಲ್ಲಿ ನಡೆದ ರಂಗು ರಂಗಿನ ರಂಗೋತ್ಸವದಲ್ಲಿ ಪ್ರತಿಷ್ಟಿತ ರಂಗಚಾವಡಿ ಪ್ರಶಸ್ತಿ ಪ್ರದಾನ. ರಂಗಚಾವಡಿ ಸಂಸ್ಥೆಯ ನಿಸ್ವಾರ್ಥ ಕಲಾಸೇವೆಯನ್ನು ಶಾಘಿಸಿದ ಐಕಳ ಹರೀಶ್ ಶೆಟ್ಟಿ ಸಹಿತ ಗಣ್ಯರನೇಕರು.

Scroll to Top