ಚಿತ್ರೀಕರಣ ಪೂರೈಸಿದ “ಪಿಲಿಪಂಜ” ಸಿನಿಮಾ

106.6K Views 11 Feb 2025

ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಅವರ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಯುವ ನಿರ್ದೇಶಕ ಭರತ್ ಶೆಟ್ಟಿ ನಿರ್ದೇಶನದ “ಪಿಲಿಪಂಜ” ವಿಭಿನ್ನ ಶೈಲಿಯ ತಂತ್ರಜ್ನಾನದ ತುಳು ಸಿನಿಮಾ ಸಂಪೂರ್ಣ ಚಿತ್ರೀಕರಣವನ್ನು ಮುಗಿಸಿದೆ.
ಒಟ್ಟು ಮೂರು ಹಂತಗಳಲ್ಲಿ ಚಿತ್ರೀಕರಣ ಮಾಡಿದ್ದ ಈ ಸಿನಿಮಾ ಫೇ: 2ರಿಂದ ಸಾಲೆತ್ತೂರು, ಕುಳಾಲು, ಕಾಡುಮಠ, ಕುಡ್ತಮುಗೇರು ಪರಿಸರದಲ್ಲಿ 5ದಿನ ಹಾಡಿನ ಚಿತ್ರೀಕರಣವನ್ನು ಮಾಡಿ ಫೆ:6ರಂದು ಕುಂಬಳಕಾಯಿ ಹೊಡೆಯುವ ಮೂಲಕ ಯಶಸ್ವಿಯಾಗಿ ಚಿತ್ರೀಕರಣವನ್ನು ಮುಗಿಸಿದೆ.
ಒಟ್ಟು 3 ಹಂತಗಳಲ್ಲಿ ದ.ಕ ಜಿಲ್ಲೆಯ ಬೇರೆ ಬೇರೆ ಪ್ರದೇಶದಲ್ಲಿ ಯಶಸ್ವಿಯಾಗಿ ಚಿತ್ರೀಕರಣವನ್ನು ಮಾಡಿ ಮುಗಿಸಿದ ಚಿತ್ರತಂಡ ಬೇಗನೆ ಸಿನಿಮಾವನ್ನು ತೆರೆಗೆ ತರುವ ತಯಾರಿಯಲ್ಲಿದೆ.
ಚಿತ್ರದಲ್ಲಿ ಒಟ್ಟು 2 ಹಾಡುಗಳಿದ್ದು, 2 ಫೈಟುಗಳಿವೆ. ದ.ಕ ಜಿಲ್ಲೆಯ ರಮಣೀಯ ಸ್ಥಳದಲ್ಲಿ ಚಿತ್ರೀಕರಣ ಮಾಡುವುದರೊಂದಿಗೆ, ಕರಾವಳಿಯ ಮನಮೋಹಕ ದೃಶ್ಯಗಳನ್ನು ಛಾಯಾಗ್ರಹಕ ಉದಯ ಬಳ್ಳಾಲ್ ಬಹಳ ಸುಂದರವಾಗಿ ಸೆರೆ ಹಿಡಿದಿದ್ದಾರೆ, ಹಾಡಿನ ಚಿತ್ರೀಕರಣದಲ್ಲಿ ರಾಜೇಶ್ ಕಣ್ಣೂರು ನೃತ್ಯ ನಿರ್ದೇಶನ ಮಾಡಿದ್ದಾರೆ.
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ಸುಂದರ್ ರೈ ಮಂದಾರ, ರವಿ ರಾಮಕುಂಜ, ಶಿವ ಪ್ರಕಾಶ್ ಪೂಂಜ ಹರೇಕಳ, ಪ್ರತೀಕ್ ಯು ಪೂಜಾರಿ, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳೂರು, ಪ್ರಕಾಶ್ ಶೆಟ್ಟಿ ಧರ್ಮನಗರ, ರಕ್ಷಣ್ ಮಾಡೂರು,ವಿಜಯಹರಿ ರೈ ಕುರಿಯ, ದಯಾನಂದ ಬೆಟ್ಟಂಪಾಡಿ, ಭಾಸ್ಕರ ಮಣಿಪಾಲ, ರೂಪಶ್ರೀ ವರ್ಕಾಡಿ, ಶ್ರೀಮತಿ ಜಯಶೀಲ, ರಾಧಿಕಾ, ದಿಶಾರಾಣಿ ಮುಂತಾದವರು ಬಣ್ಣ ಹಚ್ಚಿದ್ದಾರೆ.
ನಿರ್ಮಾಪಕ ಪ್ರತೀಕ್ ಯು ಪೂಜಾರಿ, ಕಥೆ ನಿರ್ದೇಶನ ಭರತ್ ಶೆಟ್ಟಿ, ಎಕ್ಸಿಕ್ಯೂಟಿವ್ ಪ್ರೊಡ್ಯೂಷರ್ ರಮೇಶ್ ರೈ ಕುಕ್ಕುವಳ್ಳಿ, ಕ್ಯಾಮೆರಾ ಉದಯ್ ಬಳ್ಳಾಲ್, ಸಂಗೀತ ಎಲ್ ವಿ ಯಸ್, ಸಂಕಲನ ಶ್ರೀನಾಥ್ ಪವಾರ್, ಸಹನಿರ್ದೇಶನ ಅಕ್ಷತ್ ವಿಟ್ಲ, ಸಹಾಯಕ ನಿರ್ದೇಶಕ, ಸಜೇಶ್ ಪೂಜಾರಿ, ಚಿತ್ರಕಥೆ ಸಂಭಾಷಣೆ ಸುರೇಶ್ ಬಲ್ಮಠ, ಪ್ರಚಾರ ಜಗನ್ನಾಥ ಶೆಟ್ಟಿ ಬಾಳ, ಸಾಹಸ ಸುರೇಶ್ ಶೆಟ್ಟಿ ಮತ್ತು ನವೀನ್ ಲೋಬೋ, ನೃತ್ಯ ರಾಜೇಶ್ ಕಣ್ಣೂರು, ಪ್ರೊಡಕ್ಷನ್ಸ್‌ ಮೆನೇಜರ್ ಕಾರ್ತಿಕ್ ಶೆಟ್ಟಿ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

ದುಬೈಯ ಹೆಸರಾಂತ ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ ಪ್ರಸ್ತುತಪಡಿಸುವ ಬಹು ನಿರೀಕ್ಷೆಯ ತುಳು ಚಲನಚಿತ್ರ “ಡಾ. ಮೋಹನ್ ಎಂಬಿಬಿಎಸ್” ಡಿಸೆಂಬರ್ ನಲ್ಲಿ ತೆರೆಗೆ. ಇದು ಕಾರ್ಪೊರೇಟ್ ವೈದ್ಯಕೀಯ ಮಾಫಿಯಾದ ವಿರುದ್ಧ ಸಿಡಿದೆದ್ದ ನಿಷ್ಠಾವಂತ ವೈದ್ಯನೊಬ್ಬನ ಕಥೆ .ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶನದ ಡಾ.ಸುಧಾಕರ್ ಶೆಟ್ಟಿ ಪುಣೆ- ಮೂಡಬಿದ್ರಿ ಪರಿಕಲ್ಪನೆಯ ಸಿನಿಮಾ.

Scroll to Top