ಡಾ. ಅಗರಿ ನವೀನ್ ಭಂಡಾರಿಯವರಿಗೆ ಸಮಾಜಶ್ರೀ ರಾಜ್ಯ ಪ್ರಶಸ್ತಿ.

111.6K Views 14 Feb 2025

ಬೆಂಗಳೂರು -ಅನ್ವೇಷಣೆ ಸಾಂಸ್ಕತಿಕ ಅಕಾಡೆಮಿ (ರಿ) ಬೆಂಗಳೂರು ಇವರು ಮಾರ್ಚ್ 2ರ ಬೆಳಿಗ್ಗೆ 10ರಿಂದ ಸಂಜೆ 7.30ರ ವರೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಹಕಾರಿ ರತ್ನ, ಹಿರಿಯ ಸಮಾಜ ಸೇವಕ, ರಾಜಕೀಯ ಮುಂದಾಳು, ಪುತ್ತೂರಿನ ಡಾ.ಅಗರಿ ನವೀನ್ ಭಂಡಾರಿ ಬೆಂಗಳೂರು ಇವರಿಗೆ ಸಮಾಜಶ್ರೀ ರಾಜ್ಯಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.


ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿ ಸಮಾಜಕ್ಕೆ ಇನ್ನೂ ಹೆಚ್ಚಿನ ಕೊಡುಗೆಯನ್ನು ಡಾ. ಅಗರಿ ನವೀನ್ ಭಂಡಾರಿ ಅವರು ನೀಡಲಿ ಎಂದು ಈ ಸಂದರ್ಭ ಅನ್ವೇಷಣೆ ಸಾಂಸ್ಕತಿಕ ಅಕಾಡೆಮಿ (ರಿ) ಬೆಂಗಳೂರು ಇವರು ಶುಭ ಹಾರೈಸಿದ್ದಾರೆ.
ಸಮಾಜಶ್ರೀ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವ ನವೀನ್ ಭಂಡಾರಿ ಅವರಿಗೆ Mp mla ನ್ಯೂಸ್ ಅಭಿನಂದನೆ ಸಲ್ಲಿಸುತ್ತದೆ.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top