ಫೆ.26ರಂದು ಡಾ.ಯು.ಕೆ.ಮೋನು. ಪ್ರೆಸ್ ಕ್ಲಬ್ ಗೌರವ ಅತಿಥಿ

98K Views 25 Feb 2025

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಫೆ.26ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ
ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಕಣಚೂರು ಸಮೂಹ ಸಂಸ್ಥೆಗಳ ಸ್ಥಾಪಕ ಚೇರ್ಮನ್ ಡಾ.ಯು.ಕೆ.ಮೋನು ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಹಿರಿಯ ಪತ್ರಕರ್ತ ಹಿಲರಿ ಕ್ರಾಸ್ತಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್.ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

Scroll to Top