ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ

106.5K Views 15 Mar 2025

“ಗ್ರಾಹಕರು ಖರೀದಿಸುವಾಗ ಯಾವುದೇ ವಂಚನೆಗೆ ಒಳಗಾಗಬಾರದು ಹಾಗೂ ತಮ್ಮ ಹಕ್ಕುಗಳ ಬಗೆಗೆ ಸರಿಯಾಗಿ ತಿಳಿದಿರಬೇಕು. ಪ್ರತಿಯೋರ್ವ ಗ್ರಾಹಕನು ತನ್ನ ಹಕ್ಕು ಮತ್ತು ಭಾದ್ಯತೆಗಳನ್ನು ತಿಳಿದು ನಡೆಯಬೇಕೆಂದು” ಮುಖ್ಯ ಅತಿಥಿಯಾಗಿ ಆಗಮಿಸಿದ ಅಡ್ವಕೇಟ್ ಕೆ .ಪೃಥ್ವಿರಾಜ್ ರೈ ,ಮಾಜಿ ಅಧ್ಯಕ್ಷರು ,ವಕೀಲರ ಸಂಘ ಮಂಗಳೂರು ಮಾತನಾಡಿ ಹೇಳಿದರು . ಪಿ.ಎ ಪ್ರಥಮ ದರ್ಜೆ ಕಾಲೇಜು ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಒಡಂಬಡಿಕೆಯ ಅನ್ವಯ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಮಾರ್ಚ್ 15, 2025 ರಂದು ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆಯು ನಡೆಯಿತು.


ಕಾರ್ಯಕ್ರಮದ ಪೀಠಿಕೆಯ ಕುರಿತು ಡಾ.ಅಬೂಬಕ್ಕರ್ ಸಿದ್ಧಿಕ್, ಒಡಂಬಡಿಕೆಯ ಸಂಚಾಲಕರು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ವಿವರಿಸಿಕೊಟ್ಟರು. ಪಿ.ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಂ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಯವಂತ ನಾಯಕ್ ಪ್ರಾಧ್ಯಾಪಕರು ಅರ್ಥಶಾಸ್ತ್ರವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಶರಫುದ್ದೀನ್ ಪಿ.ಕೆ, ಎ .ಜಿ .ಎಮ್ ಕ್ಯಾಂಪಸ್ ಪಿ.ಎ.ಇ.ಟಿ , ಪಿ.ಎ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಹಾರಗಳ ಮುಖ್ಯಸ್ಥರಾದ ಡಾ.ಸಯ್ಯದ್ ಅಮೀನ್ ಅಹ್ಮದ್, ಪಿ.ಎ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಜಿ ಹರಿಕೃಷ್ಣನ್, ಐ.ಕ್ಯೂ.ಎ.ಸಿ ಸಂಯೋಜಕರರಾದ ಶ್ರೀಮತಿ ವಾಣಿಶ್ರೀ ವೈ ವೇದಿಕೆಯಲ್ಲಿ ಆಸೀನರಾಗಿದ್ದರು.
ವಿದ್ಯಾರ್ಥಿಗಳಾದ ಹಿಬಾ ಮರ್ಯಂ ಕಾರ್ಯಕ್ರಮ ನಿರೂಪಿಸಿದರೆ, ಫರ್ಹಾನ್ ಸ್ವಾಗತಿಸಿ, ತಶ್ಮೀಯಾ ವಂದಿಸಿದರು. ಇರ್ಫಾದ್ ಪ್ರಾರ್ಥನೆ ನೆರವೇರಿಸಿದರು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top