ಗೂಗಲ್ ಬದಲು ಗ್ರಂಥಾಲಯ ಅವಲಂಬಿಸಿ- ಡಾ.ಸಂಕಮಾರ್

116K Views 16 Mar 2025

ಮಂಗಳೂರು : ಅಕ್ಷರ ಲೋಕಕ್ಕೆ ಪ್ರಬಲವಾದ ಶಕ್ತಿ ಇದೆ. ಇಂದಿನ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಓದುವ ಅಭಿರುಚಿ ಬೆಳೆಸುವುದು ಅವಶ್ಯವಾಗಿದೆ. ಗೂಗಲ್ ಬದಲು ಗ್ರಂಥಾಲಯ ಅವಲಂಬಿಸಲು ಪ್ರೇರಣೆ ನೀಡಬೇಕು ಎಂದು ಜಾನಪದ ವಿದ್ವಾಂಸ, ಹಿರಿಯ ಸಾಹಿತಿ ಡಾ.ಗಣೇಶ್ ಅಮೀನ್ ಸಂಕಮಾರ್ ಹೇಳಿದರು.
ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಆಯೋಜಿಸಿದ ಹಿರಿಯ ಸಾಹಿತಿಗಳ ಸಂಪರ್ಕ ಅಭಿಯಾನದಡಿ ಭಾನುವಾರ ಸ್ವಗೃಹದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ ಅವರು ಸಾಹಿತ್ಯದ ಮೂಲಬೇರು ನಮ್ಮ ಜನಪದದಲ್ಲಿದೆ. ಬದುಕಿನ ನೋವು ಜನಪದ ಸಾಹಿತ್ಯದ ಮೂಲಕ ಹೊರಹೊಮ್ಮಲು ಸಾಧ್ಯವಾಗಿದೆ. ಸಾಹಿತಿಗಳು ಮನಸ್ಸುಗಳನ್ನು ಕಟ್ಟುವ ಜತೆಗೆ ಸಮಾಜದ ಧ್ವನಿಯಾಗಬೇಕು‌ ಎಂದರು.
ಇಂದು ಸಾಹಿತ್ಯ ಸಮ್ಮೇಳನಗಳು ರಾಜಕೀಯ ಅಬ್ಬರದ ಪ್ರದರ್ಶನವಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಸಮ್ಮೇಳನ ನಿಜಾರ್ಥದಲ್ಲಿ ಸಾಹಿತಿಗಳ ಸಮ್ಮೇಳನವಾಗ ಬೇಕು‌‌ ಎಂದು ಡಾ.ಸಂಕಮಾರ್ ಅಭಿಪ್ರಾಯ ಪಟ್ಟರು.
ಅಭಾಸಾಪ‌ಜಿಲ್ಲಾ ಖಜಾಂಜಿ ಭಾಸ್ಕರ ರೈ ಕಟ್ಟ, ಸಾಹಿತ್ಯ ಕೂಟದ ಮುಖ್ಯಸ್ಥೆ ಗೀತಾ ಲಕ್ಷ್ಮೀಶ್, ಮೂಲ್ಕಿ ಘಟಕದ ಅಧ್ಯಕ್ಷ ಸರ್ವೋತ್ತಮ ಅಂಚನ್, ಕಾರ್ಯಕಾರಿ ಸಮಿತಿ ಸದಸ್ಯ ಯಾದವ ದೇವಾಡಿಗ, ನಾಟ್ಯರಾಧನಾ ಕಲಾ ಕೇಂದ್ರದ ಟ್ರಸ್ಟಿ ಬಿ.ರತ್ನಾಕರ ರಾವ್, ಜಯಂತಿ ಸಂಕಮಾರ್, ಭವ ಸಂಕಮಾರ್ ಕಾಪಸ್ಥಿತರಿದ್ದರು. ಅಭಾಸಾಪ ದ.ಕ.ಜಿಲ್ಲಾಧ್ಯಕ್ಷ ಪಿ. ಬಿ.ಹರೀಶ್ ರೈ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ್ ವಂದಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top