ಮಂಗಳೂರು ಮಾ.25(ಕ.ವಾ):- ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ಅವರು ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗೆ ಭೇಟಿ ನೀಡಿದರು.
ಕಚೇರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಇಲಾಖಾ ಪ್ರಗತಿ ಮಾಹಿತಿ ಪಡೆದರು. ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆ ಹಾಗೂ ಪತ್ರಕರ್ತರ ಪ್ರವಾಸಕ್ಕೆ ಹೊಸ ಬಸ್ ಒದಗಿಸುವ ಬಗ್ಗೆ ಶೀಘ್ರದಲ್ಲಿ ಸರಕಾರ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಅವರು ತಿಳಿಸಿದರು. ಗ್ರಾಮಾಂತರ ಪತ್ರಕರ್ತರ ಬಸ್ ಪಾಸ್ ಹಾಗೂ ಪತ್ರಕರ್ತರ ಪಿಂಚಣಿ ಯೋಜನೆ ಕುರಿತು ಅವರು ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ , ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ , ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ , ಕಚೇರಿ ಸಿಬ್ಬಂದಿಗಳು ಇದ್ದರು.
ಇದೇ ಸಂದರ್ಭದಲ್ಲಿ ಶೀಘ್ರದಲ್ಲಿ ನಿವೃತ್ತಿ ಹೊಂದಲಿರುವ ವಾರ್ತಾ ಇಲಾಖೆ ಸಿಬ್ಬಂದಿ ವಿಶ್ವನಾಥ ಜೋಗಿ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರು ಸನ್ಮಾನಿಸಿದರು.


























































































































































































