ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು -ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

108.9K Views 26 Mar 2025

ಮಂಗಳೂರು: ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ನಗರದ ಪತ್ರಿಕಾ ಭವನದಲ್ಲಿ ಪ್ರಸಾದ್ ನೇತ್ರಾಲಯ ಹಾಗೂ ಪ್ರಸಾದ್ ಮಲ್ಟಿ ಸ್ಪೆಷ್ಟಾಲಿಟಿ ಐ ಹಾಸ್ಪಿಟಲ್ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಆಯೋಜಿಸಲಾದ ಉಚಿತ ನೇತ್ರ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಸದಾ ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು ಎಂದು ಅವರು ಹೇಳಿದರು.
ರೋಟರಿ ಕ್ಲಬ್‌ನ ಮಾಜಿ ಗವರ್ನರ್ ಡಾ.ದೇವದಾಸ್ ರೈ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಕರ್ತರ ಸಂಘದ
ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್.,
ಕಾರ್ಯಕಾರಿ ಸಮಿತಿ ಸದಸದ್ಯ ರಾಜೇಶ್ ದಡ್ಡಂಗಡಿ, ಪ್ರಸಾದ್ ನೇತ್ರಾಲಯದ ವೈದ್ಯ ಡಾ. ನಿರಂಜನ್, ಸಾರ್ವಜನಿಕ ಸಂಪರ್ಕಧಿಕಾರಿ
ಯೂಸುಫ್ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

ದುಬೈಯ ಹೆಸರಾಂತ ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ ಪ್ರಸ್ತುತಪಡಿಸುವ ಬಹು ನಿರೀಕ್ಷೆಯ ತುಳು ಚಲನಚಿತ್ರ “ಡಾ. ಮೋಹನ್ ಎಂಬಿಬಿಎಸ್” ಡಿಸೆಂಬರ್ ನಲ್ಲಿ ತೆರೆಗೆ. ಇದು ಕಾರ್ಪೊರೇಟ್ ವೈದ್ಯಕೀಯ ಮಾಫಿಯಾದ ವಿರುದ್ಧ ಸಿಡಿದೆದ್ದ ನಿಷ್ಠಾವಂತ ವೈದ್ಯನೊಬ್ಬನ ಕಥೆ .ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶನದ ಡಾ.ಸುಧಾಕರ್ ಶೆಟ್ಟಿ ಪುಣೆ- ಮೂಡಬಿದ್ರಿ ಪರಿಕಲ್ಪನೆಯ ಸಿನಿಮಾ.

Scroll to Top