ಇಂದು ರೆಡ್ ಕ್ರಾಸ್ ಸೊಸೈಟಿಯಿಂದ ವಿಶ್ವ ಆರೋಗ್ಯ ದಿನಾಚರಣೆ

107K Views 6 Apr 2025

ಮಂಗಳೂರು : ಇಂಡಿಯನ್
ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ಯೂತ್ ರೆಡ್ ಕ್ರಾಸ್ ಘಟಕ ಮಂಗಳೂರು ವಿ.ವಿ., ಯನೆಪೋಯ ಪರಿಗಣಿತ ವಿ.ವಿ. ಮತ್ತು ವಿ.ವಿ.ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಏ.7 ರಂದು ಬೆಳಗ್ಗೆ 9 ಕ್ಕೆ ನಗರದ ವಿ.ವಿ.ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ.
ರೆಡ್ ಕ್ರಾಸ್ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿ.ವಿ.ಕಾಲೇಜಿನ ಪ್ರಾಂಶುಪಾಲ ಪ್ರೊ.ಗಣಪತಿ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
ರೆಡ್ ಕ್ರಾಸ್ ಆರೋಗ್ಯ ಮತ್ತು ಪ್ರಥಮ ಚಿಕಿತ್ಸೆ ಉಪ ಸಮಿತಿ ಚೇರ್ಮನ್ ಡಾ.ಸಚ್ಚಿದಾನಂದ ರೈ, ಉಪಾಧ್ಯಕ್ಷ ಡಾ.ಸತೀಶ್ ರಾವ್, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ, ನಿರ್ದೇಶಕ ರಾದ ಡಾ.ಸುಮನ .ಬಿ., ಸಚೇತ್ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಯೇನೆಪೊಯ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಶ್ವೇತಾ ಪ್ರಭು ಮತ್ತು ಪ್ರತೀಕ್ಷಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರು ವಿ.ವಿ.ಯ ಯೂತ್ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ.ಗಾಯತ್ರಿ.ಎನ್., ಯೇನೆಪೊಯ ವಿ.ವಿ.ಯ ನೋಡಲ್ ಅಧಿಕಾರಿ ನಿತ್ಯಶ್ರೀ.ಬಿ.ವಿ. ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Read More News

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ, ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಅವರ ಪತ್ನಿ ಅಗಲಿಕೆ: ಮಂಗಳೂರಿನ ಹ್ಯಾಟ್ ಹಿಲ್ ನಲ್ಲಿ ಇಂದು ಬೆಳಿಗ್ಗೆ (ಅಕ್ಟೋಬರ್ 25) ಗಂಟೆ 10 ರಿಂದ 12ರವರೆಗೆ ಅಂತಿಮ ದರ್ಶನ ಮತ್ತು 12.30ಕ್ಕೆ ಕದ್ರಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ

Scroll to Top