ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಹವ್ಯಾಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

93.9K Views 25 Apr 2025

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶ್ ಟ್ರಸ್ಟ್ ನ ಹವ್ಯಾಸಿ ಘಟಕದ ಸಭೆ ಬಲ್ಲಾಲ್ ಬಾಗ್‌ನಲ್ಲಿರುವ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹವ್ಯಾಸಿ ಘಟಕದ ನೂತನ ಪದಾಧಿಕಾರಿಗಳ ನೇಮಕ ನಡೆಯಿತು.
ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಉಪಾಧ್ಯಕ್ಷರಾಗಿ ತೋನ್ಸೆ ಪುಷ್ಕಳ ಕುಮಾರ್, ದಿವಾಕರ ಆಚಾರ್ಯ ಗೇರುಕಟ್ಟೆ, ಕಾರ್ಯದರ್ಶಿಯಾಗಿ ವಿನಯ ಆಚಾರ್ ಹೊಸಬೆಟ್ಟು, ಸಂಚಾಲಕರಾಗಿ ಸದಾಶಿವ ಆಳ್ವ ತಲಪಾಡಿ, ಕೋಶಾಧಿಕಾರಿಯಾಗಿ ವಿಜಯ ಶಂಕರ ಆಳ್ವ ಮಿತ್ತಳಿಕೆ,
ಸಹ ಕಾರ್ಯದರ್ಶಿಗಳಾಗಿ ಮಧುಸೂಧನ ಅಲೆವೂರಾಯ ಮತ್ತು ಕುಂಜತ್ತೂರು ಗಣೇಶ್, ಸಹ ಸಂಚಾಲಕರಾಗಿ ಚಂದ್ರಶೇಖರ ಕೊಂಕಣಾಜೆ ಮತ್ತು ಹರಿಶ್ಚಂದ್ರನಾಯ್ಕ ಮಾಡೂರು ಆಯ್ಕೆಯಾದರು.


ಗೌರವ ಸಲಹೆಗಾರರಾಗಿ ಡಾ ಎಂ ಪ್ರಭಾಕರ ಜೋಶಿ, ಜಬ್ಬಾರ್ ಸಮೋ ಸಂಪಾಜೆ, ಹರೀಶ್ ಬಳಂತಿಮೊಗರು, ಸುಬ್ರಹ್ಮಣ್ಯ ಬೈಪಡಿತ್ತಾಯ, ಪ್ರೊ ಭಾಸ್ಕರ್ ರೈ ಕುಕ್ಕುವಳ್ಳಿ, ಸುಂದರ ಶೆಟ್ಟಿ ಬೆಟ್ಟಂಪಾಡಿ ಆಯ್ಕೆಯಾದರು.
ಇದೇ ಸಂದರ್ಭದಲ್ಲಿ ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದ ದಶಮ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

Read More News

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಯಶಸ್ವಿಯಾಗಿ 30ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ದುಬೈನಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ಆರೋಗ್ಯ, ಶಿಕ್ಷಣ, ವೈದ್ಯಕೀಯ ಸಮಾಜಮುಖಿ ಬಹು ಯೋಜನೆಗಳ ಬಗ್ಗೆ ಹುಟ್ಟೂರು ತುಂಬೆ ಹಿಲ್ಸ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ತುಂಬೆ ಗ್ರೂಪ್ಸ್ ಸಂಸ್ಥಾಪಕ ಡಾ. ತುಂಬೆ ಮೊಯ್ದೀನ್

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top