ಕೆ.ಎಂ.ಸಿ ಮಣಿಪಾಲ್ ಕಾಲೇಜು ತಂಡಕ್ಕೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ 2025 ಪ್ರಶಸ್ತಿ

107.6K Views 17 May 2025

ಮಂಗಳೂರು: ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತç ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತç ಶಿಕ್ಷಣ ವಿದ್ಯಾರ್ಥಿಗಳಿಗಾಗಿ 4ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧಾಕೂಟ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ 2025 ಶನಿವಾರ ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಈ ಸ್ಪರ್ಧಾಕೂಟದಲ್ಲಿ ಕೆ.ಎಂ.ಸಿ. ಮಣಿಪಾಲ್ ತಂಡವನ್ನು ಪ್ರತಿನಿಧಿಸಿದ ಡಾ.ಅದಿತಿ ರಾವ್ ಮತ್ತು ಡಾ. ಸಾಯಿ ಭವಾನಿ ರೆಡ್ಡಿ ತಂಡ ಪ್ರಥಮ ಸ್ಥಾನ ಗಳಿಸಿ ಪ್ರತಿಷ್ಠಿತ ಮೆಡಿಕ್ವಿಜ್ ಪ್ರಶಸ್ತಿ ಪಡೆಯಿತು. ಕಣಚೂರು ವೈದ್ಯಕೀಯ ಕಾಲೇಜನ್ನು ಪ್ರತಿನಿಧಿಸಿದ ಡಾ. ವಿನಾಯಕ್ ಎಸ್.ಕೆ. ಮತ್ತು ಡಾ. ರಾಘವೇಂದ್ರ ಡಿ. ತಂಡ ದ್ವಿತೀಯ ಸ್ಥಾನ, ತೃತೀಯ ಸ್ಥಾನವನ್ನು ನಗರದ ಎ.ಜೆ. ವೈದ್ಯಕೀಯ ಕಾಲೇಜಿನ ಡಾ. ವರುಣ್ ಶೆಟ್ಟಿ ಮತ್ತು ಡಾ. ಅಭಿನ್ ರೈ ತಂಡ ಗಳಿಸಿತು.


ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಪ್ರೊö.ಡಾ. ಮೊಹಮ್ಮದ್ ಇಸ್ಮಾಯಿಲ್ ಅತಿಥಿಯಾಗಿ ಮಾತನಾಡಿ, ವೈದ್ಯಕೀಯ ಶಿಕ್ಷಣ ವಿಧ್ಯಾರ್ಥಿಗಳು ಶೈಕ್ಷಣಿಕ ಸ್ಪರ್ಧಾಕೂಟದಲ್ಲಿ ಪಾಲ್ಗೊಂಡು ತಮ್ಮ ಶೈಕ್ಷಣಿಕ ಜ್ಞಾನವನ್ನು ವೃದ್ಧಿಸಿದರೆ ಭವಿಷ್ಯದ ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಸಲಹೆ ನೀಡಿ ಸ್ಪರ್ಧಾ ವಿಜೇತರ ಸಾಧನೆಯನ್ನು ಪ್ರಶಂಸಿಸಿ ಪ್ರಶಸ್ತಿ, ಆಕರ್ಷಕ ಬಹುಮಾನ ಮತ್ತು ಪ್ರಶಸ್ತಿ ಪ್ರಮಾಣ ಪತ್ರವನ್ನು ಪ್ರಧಾನ ಮಾಡಿ ಅಭಿನಂದಿಸಿದರು.
ಕಣಚೂರು ವೈದ್ಯಕೀಯ ಶಿಕ್ಷಣ ಕಾಲೇಜಿನ ಪ್ರಿನ್ಸಿಪಾಲ್‌ರಾದ ಡಾ. ಶಹನವಾಜ್ ಮಣಿಪಾಡಿ ಮತ್ತು ಕಣಚೂರು ವೈದ್ಯಕೀಯ ಕಾಲೇಜಿನ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ. ಹರೀಶ್ ಶೆಟ್ಟಿ ಮತ್ತು ಸಲಹಾ ಸಮಿತಿಯ ಸದಸ್ಯ ಪ್ರೊö.ಡಾ. ಎಂ.ವಿ. ಪ್ರಭು ಉಪಸ್ಥಿತರಿದ್ದರು. ವೈದ್ಯಕೀಯ ಶಾಸ್ತç ವಿಭಾಗದ ಮುಖ್ಯಸ್ಥ ಪ್ರೊö.ಡಾ. ದೇವದಾಸ್ ರೈ ಸ್ಪರ್ಧಾಕೂಟವನ್ನು ನಿರೂಪಿಸಿದರು. ಅವಿಭಜಿತ ದ.ಕ.ಜಿಲ್ಲೆಯ ನಾನಾ ವೈದ್ಯಕೀಯ ಶಿಕ್ಷಣ ಕಾಲೇಜಿನ 28 ತಂಡಗಳು ನಿರ್ಣಾಯಕ ಮತ್ತು ಅಂತಿಮ ಸುತ್ತಿಗೆ ಪ್ರವೇಶ ಪಡೆದಿತ್ತುö.
ಡಾ. ದೇವದಾಸ್ ರೈ ಸ್ವಾಗತಿಸಿ ಸ್ಪರ್ಧಾಕೂಟದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ಮೊಹಮ್ಮದ್ ಶಹಾದ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಎಂ.ವಿ. ಮಲ್ಯರವರು ಬಹುಮಾನಗಳನ್ನು ಪ್ರಯೋಜಿಸಿದರು.

Scroll to Top