ಕ್ಯಾಥೊಲಿಕ್ ಸಭಾ ಕೂಳೂರು ಘಟಕದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಾಣ

103.2K Views 24 May 2025

ಮಂಗಳೂರು: ಕ್ಯಾಥೊಲಿಕ್ ಸಭಾ ಕೂಳೂರು ಘಟಕವು ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿದ್ದು, ಈ ಆಚರಣೆಯ ಶುಭ ಸಂದರ್ಭದಲ್ಲಿ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಬಡ ಕುಟುಂಬವೊಂದಕ್ಕೆ ಬಂಗ್ರ ಕೂಳೂರಿನಲ್ಲಿ ಅವರ ಸ್ವಂತ ಜಾಗದಲ್ಲಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಟ್ಟಿದ್ದು, ಈ ಮನೆಯ ಉದ್ಘಾಟನೆ, ಆಶೀರ್ವಚನ ಹಾಗೂ ಹಸ್ತಾಂತರ ಕಾರ್ಯಕ್ರಮ ಮೇ 25 ರಂದು ಬೆಳಗ್ಗೆ 11 ಗಂಟೆಗೆ ಬಂಗ್ರ ಕುಳೂರಿನಲ್ಲಿ ನೆರವೇರಲಿದೆ.
ಆಶೀರ್ವಚನ ಮತ್ತು ಉದ್ಘಾಟನೆಯನ್ನು ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಅಲೋಶಿಯಸ್‌ ಪಾವ್ಲ್ ಡಿ’ಸೋಜಾ ನೆರವೇರಿಸಲಿದ್ದು, ಅಧ್ಯಕ್ಷತೆಯನನ್ರು ಕ್ಯಾಥೊಲಿಕ್‌ ಸಭಾ ಕೂಳೂರು ಘಟಕದ ಆಧ್ಯಾತ್ಮಿಕ ನಿರ್ದೇಶಕ ಹಾಗೂ ಕುಳೂರು ಸಂತ ಅಂತೋನಿ ಚರ್ಚ್ ನ ಧರ್ಮಗುರು ವಂದನೀಯ ವಿಕ್ಟರ್‌ ವಿಜಯ್‌ ಲೋಬೋ ಅವರು ವಹಿಸಲಿದ್ದಾರೆ. ಎಪಿಸ್ಕೋಪಲ್‌ ಸಿಟಿ ವಲಯದ ಆಧ್ಯಾತ್ಮಿಕ ನಿರ್ದೇಶಕ ವಂದನೀಯ ಜಾನ್‌ ವಾಸ್‌, ದಾಯ್ಜಿ ವರ್ಲ್ಡ್ ಮೀಡಿಯಾ ಸಂಸ್ಥೆಯ ಸ್ಥಾಪಕ ವಾಲ್ಟರ್ ನಂದಳಿಕೆ, ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್‌ ಲೋಬೊ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕ್ಯಾಥೊಲಿಕ್‌ ಸಭಾ ಕೂಳೂರು ಘಟಕದ ಅಧ್ಯಕ್ಷ ರೋವಿನ್‌ ಡಿ’ಸೋಜಾ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top