ಬಹು ನಿರೀಕ್ಷಿತ ಮಕ್ಕಳ ಚಿತ್ರ “ಸ್ಕೂಲ್ ಲೀಡರ್” ರಾಜ್ಯಾದ್ಯಂತ ಬಿಡುಗಡೆ

116.9K Views 30 May 2025

ಮಂಗಳೂರು: ಸನ್ ಮ್ಯಾಟ್ರಿಕ್ಸ್ ಸಿನಿಮಾಸ್ ಮತ್ತು ಫಿಲ್ಮ್ ವೀಲ್ ಸ್ಟುಡಿಯೋಸ್ ಅರ್ಪಿಸುವ “ಸ್ಕೂಲ್ ಲೀಡರ್” ಸಿನಿಮಾ ನಗರದ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಯಾಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಸಿಎ ಎಸ್ ಎಸ್ ನಾಯಕ್ ಅವರು, “ಇದು ನಿರ್ಮಾಪಕ ಸತ್ಯೇಂದ್ರ ಪೈ ಅವರ ಮೂರನೇ ಸಿನಿಮಾ. ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಒತ್ತಡದಿಂದ ಹೊರಬಂದು ಹೇಗೆ ಜೀವನದಲ್ಲಿ ಸಾಧನೆ ಮಾಡಬಹುದು ಅನ್ನುವುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಕನ್ನಡ ಶಾಲೆಗಳ ಇಂದಿನ ಪರಿಸ್ಥಿತಿಯನ್ನು ಮನಮುಟ್ಟುವಂತೆ ಚಿತ್ರಿಸಲಾಗಿದೆ. ಎಲ್ಲರೂ ಸಿನಿಮಾ ನೋಡಿ ಮಕ್ಕಳನ್ನು ಪ್ರೋತ್ಸಾಹಿಸಿ“ ಎಂದರು.
ಬಳಿಕ ಪ್ರಕಾಶ್ ಪಾಂಡೇಶ್ವರ್ ಮಾತಾಡಿ, ”ಸ್ಕೂಲ್ ಲೀಡರ್ ಹೈಸ್ಕೂಲ್ ಜೀವನದ ಕಥೆ ಎಲ್ಲರಿಗೂ ಈ ಸಿನಿಮಾ ಖಂಡಿತ ಇಷ್ಟವಾಗುತ್ತದೆ, ಎಲ್ಲರೂ ಸಿನಿಮಾ ನೋಡಿ“ ಎಂದು ಶುಭ ಹಾರೈಸಿದರು.


ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮಾತಾಡಿ, ”ಪೆನ್ಸಿಲ್ ಬಾಕ್ಸ್ ಕೊಟ್ಟಿದ್ದ ಚಿತ್ರ ನಿರ್ದೇಶಕ ರಝಾಕ್ ಪುತ್ತೂರು ಈಗ ಸ್ಕೂಲ್ ಲೀಡರ್ ನಂತಹ ಉತ್ತಮ ಗುಣಮಟ್ಟದ ಸಿನಿಮಾ ಕೊಟ್ಟಿದ್ದಾರೆ. ಇಂತಹ ಇನ್ನಷ್ಟು ಸಿನಿಮಾಗಳು ಬರಲಿ, ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ“ ಎಂದರು.
ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಭರತ್ ಮಾತಾಡಿ, ”ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದರೂ ಸರಕಾರಿ ಶಾಲೆಗಳಲ್ಲಿ ಮಕ್ಕಳನ್ನು ಯಾವ ರೀತಿ ಬೆಳೆಸುತ್ತಾರೆ ಅನ್ನುವುದನ್ನು ಸಿನಿಮಾದಲ್ಲಿ ತೋರಿಸಿದ್ದಾರೆ. ಸಿನಿಮಾ ನೂರು ದಿನ ಪೂರೈಸಲಿ“ ಎಂದರು.
ಸಮಾರಂಭದಲ್ಲಿ ನಿರ್ಮಾಪಕ ಸತ್ಯೇಂದ್ರ ಪೈ, ನಿರ್ದೇಶಕ ರಝಾಕ್ ಪುತ್ತೂರು, ವಾಲ್ಟರ್ ನಂದಳಿಕೆ, ಹಿರಿಯ ಪತ್ರಕರ್ತ ಆನಂದ ಶೆಟ್ಟಿ, ಚಿತ್ರ ನಿರ್ದೇಶಕ ರಜಾಕ್ ಪುತ್ತೂರು, ಭೋಜರಾಜ್ ವಾಮಂಜೂರ್, ಪ್ರಸನ್ನ ಶೆಟ್ಟಿ, ವಾಮನ ಕಾಮತ್, ಸುಚಿತ್ರ ನಾಯಕ್, ತ್ರಿಶುಲ್ ಶೆಟ್ಟಿ, ಮಯೂರ್ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ, ಬಿ ರವೀಂದ್ರ ಶೆಟ್ಟಿ, ಸುದರ್ಶನ್ ಶಂಕರ್, ರಮೇಶ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು. ಕುಮಾರ್ ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top