ಮಂಗಳೂರು,ಮೇ.31;ಅಂಗನವಾಡಿಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸರಕಾರ ಗಮನಹರಿಸುತ್ತಿದೆ ಎಂದು ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.
ಅವರು ನಗರದ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳಿಗೆ ಕೊಡೆ ವಿತರಿಸಿ ಮಾತನಾಡುತ್ತಿದ್ದರು.
ಅಂಗನವಾಡಿ ಕೇಂದ್ರಗಳು ಪ್ರಾಥಮಿಕ ಶಾಲಾ ಪೂರ್ವ ಮಕ್ಕಳ ಮಾನಸಿಕ ದೈಹಿಕ ವಿಕಸನ ಕೇಂದ್ರಗಳಾಗಿವೆ ಎಂದರು.
ಈ ಸಂದರ್ಭದಲ್ಲಿ ರೋಟರಿ ಸೆಂಟ್ರಲ್ ಮಂಗಳೂರು ಘಟಕದ ಅಧ್ಯಕ್ಷ ಬ್ರಿಯಾನ್ ಪಿಂಟೊ, ಮಾಜಿ ರೋಟರಿ ಸಹಾಯಕ ಗವರ್ನರ್ ರಾಜ ಗೋಪಾಲ್ ರೈ,ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಮಹಾ ಪ್ರಬಂಧಕ ಅರುಣ್ ಪ್ರಭಾ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಅಂಗನವಾಡಿ ಕಾರ್ಯಕರ್ತೆ ನಂದಾ,ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಮೊದಲಾದವರು ಉಪಸ್ಥಿತರಿದ್ದರು.

















































































































































































