ಪ್ಲಾಸ್ಟಿಕ್ ತ್ಯಾಜ್ಯ ಪರಿಸರಕ್ಕೆ ಮಾರಕ -ಆರ್.ಕೆ.ನಾಯರ್

117K Views 5 Jun 2025

ಮಂಗಳೂರು,ಜೂ.5: ಅತಿಯಾದ ಪ್ಲಾಸ್ಟಿಕ್ ಬಳಸುವುದರಿಂದ ಉಂಟಾಗುತ್ತಿರುವ ತ್ಯಾಜ್ಯ ನಮ್ಮ ಸುತ್ತಮುತ್ತಲಿನ ಪರಿಸರದೊಂದಿಗೆ ಸೇರಿ ಸಮಸ್ತ ಜೀವ ಸಂಕುಲಕ್ಕೆ ಹಾನಿ ಯುಂಟು ಮಾಡುತ್ತಿದೆ ಈ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿದೆ ಎಂದು ಗ್ರೀನ್ ಹೀರೋ ಓಫ್ ಇಂಡಿಯಾ ಆರ್.ಕೆ. ನಾಯರ್ ತಿಳಿಸಿದ್ದಾರೆ.
ಬಲ್ಮಠ ಸರಕಾರಿ ಪದವಿ ಪೂರ್ವ ಮಹಿಳಾ ಕಾಲೇಜುನಲ್ಲಿ ಅರಣ್ಯ ಇಲಾಖೆ, ಮಂಗಳೂರು, ಪರಿಸರ ಅಧ್ಯಯನ ಕೇಂದ್ರ ಹಾಗೂ ಬಲ್ಮಠ ಸರಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಕೃಷಿ ಚಟುವಟಿಕೆ ಯಲ್ಲಿ ರಾಸಾಯನಿಕ ಬಳಕೆ ಮಾಡುವುದರಿಂದ ಪರಿಸರದ ಮೇಲೆ ಬಹಳಷ್ಟು ಹಾನಿ ಉಂಟಾಗುತ್ತಿದೆ. ರಾಸಾಯನಿಕ ಬಳಕೆ ಸಂಪೂರ್ಣ ನಿಲ್ಲಿಸಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಸಹಾಯಕ ವಲಯ ಅರಣ್ಯಧಿಕಾರಿ ಮೋಹನ್, ಉದ್ಯಮಿ ರಮೇಶ್ ನಾಯಕ್, ಲೆಕ್ಕ ಪರಿಶೋಧಕ ಎಸ್. ಎಸ್. ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ನಿಯೋಜಿತ ಅಧ್ಯಕ್ಷ ಭಾಸ್ಕರ್ ರೈ, ಬಲ್ಮಠ ಸರಕಾರಿ ಪದವಿ ಪೂರ್ವ ಕಾಲೇಜುನ ವನಿತಾ ದೇವಾಡಿಗ, ರೆಡ್ ಕ್ರಾಸ್ ಸೊಸೈಟಿ ಸದಸ್ಯ ಪುಷ್ಪರಾಜ್ ಬಿ ಎನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top