ಮಾತಾ ಅಮೃತಾನಂದಮಯಿ ಮಠ-ಅಯುಧ್ ಮಂಗಳೂರು ಇವರಿಂದ ವಿಶ್ವ ಪರಿಸರ ದಿನಾಚರಣೆ.

106.6K Views 6 Jun 2025

ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ಯುವ ಸೇವಾ ವಿಭಾಗ ಅಯುಧ್ ಮಂಗಳೂರು ಇವರಿಂದ ನಗರದ ಬೊಕ್ಕಪಟ್ನದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರದಿನವನ್ನು ಅರ್ಥಪೂರ್ಣ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.
ಆಯುಷ್ ಇಲಾಖೆಯ ನಿವೃತ್ತ ಅಧಿಕಾರಿ ಡಾ.ದೇವದಾಸ್ ಪುತ್ರನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಮಠದ ಯುವ ಸೇವಾ ವಿಭಾಗವಾದ “ಅಯುಧ್” ಮೂಲಕ ವಿಶ್ವದಾದ್ಯಂತ ಪರಿಸರ ಸಂರಕ್ಷಣೆಯ ಬಗ್ಗೆ ಜನ ಜಾಗೃತಿ ಮೂಡಿಸುವ ಕಾರ್ಯಕ್ಕೆ ಸ್ಪೂರ್ತಿ ನೀಡುತ್ತಿದ್ದಾರೆ.ಅಮ್ಮನವರ ಅನುಗ್ರಹದೊಂದಿಗೆ ಅಯುಧ್ ಮಂಗಳೂರು ತಂಡವು ಹಲವು ವರ್ಷಗಳಿಂದ ಪರಿಸರ ಸಂರಕ್ಷಣೆಗಾಗಿ ಅಮಲ ಭಾರತ ಸ್ವಚ್ಛತಾ ಜನಜಾಗರಣ ಅಭಿಯಾನ, ಗಿಡಗಳನ್ನು ಬೆಳೆಸುವುದು, ಬೀಜದ ಉಂಡೆಗಳನ್ನು ಮಾಡಿ ಉಪಯುಕ್ತ ಫಲಗಳ ಮರಗಳು ಬೆಳೆಸುವ ಪ್ರಯತ್ನ ಶ್ಲಾಘನೀಯ ಎಂದರು. ಮಕ್ಕಳಿಗೆ ಬಾಲ್ಯದಲ್ಲೇ ಔಷಧೋಪಯೋಗಿ ಸಸ್ಯಗಳ ಪರಿಚಯವನ್ನು ಮಾಡಿ ಅದರ ಉಪಯೋಗದ ಮಾಹಿತಿ ನೀಡಿದಲ್ಲಿ ಪ್ರಾಥಮಿಕ ಆರೋಗ್ಯ ಸಮಸ್ಯೆ ಹಾಗೂ ಸ್ವಾಸ್ಥ್ಯ ಸಂರಕ್ಷಣೆಗೆ ಸಹಕಾರಿಯಾಗುತ್ತದೆ ಎಂದು ನುಡಿದರು.


ಅಮೃತ ಜ್ಯೋತಿ ಯವರು ಮಾತನಾಡಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡುತ್ತಿರುವ ಸಸ್ಯದ ಬೀಜವನ್ನೊಳಗೊಂಡ ಪರಿಸರಸ್ನೇಹಿ ಪೆನ್ಸಿಲ್ ಬಗ್ಗೆ ಮಾಹಿತಿ ನೀಡಿದರು.ಈ ಶಾಲೆಯಲ್ಲಿ
ಮುಂದೆ ಅಡುಗೆಗೆ ಉಪಯುಕ್ತವಾಗುವ ತರಕಾರಿ ಗಿಡಗಳನ್ನು ಬೆಳೆಸುವ ಯೋಜನೆ ಇದೆ ಎಂದರು.
ಈ ಸಂದರ್ಭದಲ್ಲಿ ಸಸಿಗಳನ್ನು ಹಾಗೂ ಬೀಜಯುಕ್ತ ಪೆನ್ಸಿಲ್ಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು.
ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ರವರ ನಿರ್ದೇಶನದಂತೆ ನಡೆದ ಈ ಕಾರ್ಯಕ್ರಮದಲ್ಲಿ
ಶಾಲಾಮುಖ್ಯ ಶಿಕ್ಷಕಿ ಡ್ರೆಸಿಲ್ ಲಿಲ್ಲಿ ಮೆನೆಜಸ್,ಅಯುಧ್ ಅಧ್ಯಕ್ಷರಾದ ಅಡ್ವೊಕೇಟ್ ಸ್ವಸ್ತಿ ಶೆಟ್ಟಿ,ಕಾರ್ಯದರ್ಶಿ ಡಾ.ರಿಷಿಕೇಶ್ ಪ್ರೇಮರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಶಾಲಾ ಶಿಕ್ಷಕಿ ವೀಣಾ ಧಾರಿಣಿ ನಿರೂಪಿಸಿದರು.ಅಯುಧ್ ಸದಸ್ಯರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top