ರೋಟರಾಕ್ಟ್ ಜಿಲ್ಲಾಮಟ್ಟದ ವಾರ್ಷಿಕ ರಸಪ್ರಶ್ನೆ ಸ್ಪರ್ಧಾಕೂಟ

92.4K Views 7 Jun 2025

ಮಂಗಳೂರು: ಜಿಲ್ಲಾ ರೋಟರಾಕ್ಟ್ ಸಂಸ್ಥೆಯ ಮತ್ತು ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಜಂಟಿ ಆಶ್ರಯದಲ್ಲಿ ರೋಟರಾಕ್ಟ್ ಮಾಹಿತಿ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ದಿ.ರೋ. ಶಾಂತಾರಾಮ್ ವಾಮಂಜೂರು ಸ್ಮಾರಕ 19ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ್‌ಕ್ಲಬ್ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟ ಸಂಸ್ಥೆಯ ಸಭಾಪತಿ ಡಾ. ದೇವದಾಸ್ ರೈ ನೇತೃತ್ವದಲ್ಲಿ ಶನಿವಾರ ನಗರದ ಈಡನ್ ಕ್ಲಬ್ ಸಭಾಂಗಣದಲ್ಲಿ ಜರುಗಿತು.
ರೋಟರಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯನ್ನು ಪ್ರತಿನಿಧಿಸಿದ ರೋ.ಸಾತ್ವಿಕ್ ಕೊಟೆಕಾರ್ ಮತ್ತು ರೋ.ಶಮನ್ ಜೋಡಿ ತಂಡ ಪ್ರಥಮ ಸ್ಥಾನ ಗಳಿಸಿತು. ರೋಟರಾಕ್ಟ್ ಕ್ಲಬ್ ವನಚೈತನ್ಯ, ಬೆಂಗಳೂರು ಸಂಸ್ಥೆಯನ್ನು ಪ್ರತಿನಿಧಿಸಿದ ರೋ. ಶ್ರೀಖರ್ ದ್ವಿತೀಯ ಸ್ಥಾನ ಪಡೆದರು.
ಖ್ಯಾತ ತುಳು ಚಲನಚಿತ್ರ ನಟ ಭೋಜರಾಜ ವಾಮಂಜೂರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ತಮ್ಮ ದಿವಂಗತ ಸಹೋದರ ರೋ.ಶಾಂತಾರಾಮ್ ವಾಮಂಜೂರು ಸ್ಮರಣಾರ್ಥ ವರ್ಷಂಪ್ರತಿ ಈ ಸ್ಪರ್ಧಾಕೂಟವನ್ನು ಆಯೋಜಿಸುವ ರೋಟರಾಕ್ಟ್ ಸಂಸ್ಥೆಯ ನಿಸ್ವಾರ್ಥ ಸಮಾಜಸೇವಾ ಕಾರ್ಯ ಶ್ಲಾಘನೀಯ ಎಂದು ನುಡಿದು ರೋಟರಾಕ್ಟ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿ, ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ, ಪ್ರಶಸ್ತಿ ಪ್ರಮಾಣ ಪತ್ರ ಪ್ರದಾನ ಮಾಡಿ ಅವರ ಸಾಧನೆಯನ್ನು ಅಭಿನಂದಿಸಿದರು.
ಅಂತಾರಾಷ್ಟ್ರೀಯ ರೋಟರಾಕ್ಟ್ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಗುಂಟೂರು ನಗರದ ರೋ.ರವಿ ವಡ್ಲಮಣಿಯವರು ಗೌರವ ಅತಿಥಿಯಾಗಿ ಪಾಲ್ಗೊಂಡಿದ್ದರು.
ರೋಟರಾಕ್ಟ್ ಜಿಲ್ಲಾ ಚುನಾಯಿತ ಪ್ರತಿನಿಧಿ ಮೈಸೂರು ನಗರ ಮೂಲದ ರೋ. ಪ್ರಜ್ವಲ್, ರೋಟರಾಕ್ಟ್ ದಕ್ಷಿಣ ಏಷ್ಯಾ ಸಂಸ್ಥೆಯ ಅಧ್ಯಕ್ಷ ಡೇರಿಲ್ ಡಿಸೋಜ, ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆಯ ಚುನಾಯಿತ ಅಧ್ಯಕ್ಷ ರೋ.ಭಾಸ್ಕರ್ ರೈ, ವಾಣಿ ವಾಮಂಜೂರ್ ಉಪಸ್ಥಿತರಿದ್ದರು. ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಅಧ್ಯಕ್ಷ ರೋ.ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಮಟ್ಟದ 10 ತಂಡಗಳು ಅಂತಿಮ ಮತ್ತು ನಿರ್ಣಾಯಕ ಸುತ್ತಿಗೆ ಪ್ರವೇಶ ಪಡೆದಿತ್ತು. ಈ ಸ್ಪರ್ಧಾಕೂಟವನ್ನು ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಸಭಾಪತಿ ಡಾ.ದೇವದಾಸ್ ರೈ ನಿರೂಪಿಸಿದರು. ಕಾರ್ಯದರ್ಶಿ ರೋ. ಅಕ್ಷಯ್ ರೈ ವಂದಿಸಿದರು.
ರೋ. ದಿ. ಶಾಂತಾರಾಮ್ ವಾಮಂಜೂರ್‌ರವರು ಸಂಸ್ಥೆಯ ನಿಷ್ಠಾವಂತ ಸದಸ್ಯರಾಗಿದ್ದು, ನಿಸ್ವಾರ್ಥ ಸೇವಾ ಮನೋಭಾವ ಹೊಂದಿದ್ದು, 2006 ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆಕಸ್ಮಿಕ ವಾಹನ ರಸ್ತೆ ಅಪಘಾತದ ದುರಂತದಲ್ಲಿ ವಿಧಿವಶರಾಗಿದ್ದರು. ಅವರ ಸ್ಮರಣಾರ್ಥ ಪ್ರತಿವರ್ಷ ವಾರ್ಷಿಕ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟವನ್ನು ಆಯೋಜಿಸಲಾಗುವುದು ಎಂದು ಡಾ.ದೇವದಾಸ್ ರೈಯವರು ಮಾಹಿತಿ ನೀಡಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top