ರೆಡ್‌ಕ್ರಾಸ್‌ನಿಂದ ನಾಗರಿಕ ಸುರಕ್ಷಾ ತರಬೇತಿ. ರೆಡ್‌ಕ್ರಾಸ್ ರಾಜ್ಯ ಉಪಾಧ್ಯಕ್ಷ ಭಾಸ್ಕರ ರಾವ್ ಆಶಯ

108.4K Views 9 Jun 2025

ಮಂಗಳೂರು: ಸಮಾಜಮುಖಿ ಸೇವೆಗೆ ಇಡೀ ವಿಶ್ವದಲ್ಲೇ ರೆಡ್‌ಕ್ರಾಸ್ ಸಂಸ್ಥೆ ಅತ್ಯುತ್ತಮ ವೇದಿಕೆಯಾಗಿದೆ. ನಾಗರಿಕರ ಸುರಕ್ಷತೆಗೆ ರೆಡ್‌ಕ್ರಾಸ್ ವಿಶೇಷ ಅದ್ಯತೆ ನೀಡಿದ್ದು ಮುಂದಿನ ದಿನಗಳಲ್ಲಿ ರೆಡ್‌ಕ್ರಾಸ್ ಮೂಲಕ ನಾಗರಿಕ ಸುರಕ್ಷಾ ತರಬೇತಿ ನೀಡಲು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ರೆಡ್‌ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ, ನಿವೃತ್ತ ಎಡಿಜಿಪಿ ಭಾಸ್ಕರ ರಾವ್ ಹೇಳಿದರು.
ಸೋಮವಾರ ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಕಚೇರಿಗೆ ಭೇಟಿ ನೀಡಿದ ಸಂದರ್ಭ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕ ರಾಜ್ಯದ ಅತ್ಯುತ್ತಮ ಘಟಕಗಳಲ್ಲಿ ಒಂದಾಗಿದ್ದು, ಭವ್ಯ ಕಟ್ಟಡ ಸಹಿತ ಉತ್ತಮ ಮೂಲಭೂತ ಸೌಲಭ್ಯ ಹೊಂದಿದೆ ಎಂದರು.
ಉದ್ಘಾಟನೆಗೆ ಸಿದ್ದವಾಗಿರುವ ದ.ಕ.ಜಿಲ್ಲಾ ಘಟಕದ ಶತಮಾನೋತ್ಸವ ಕಟ್ಟಡವನ್ನು ವೀಕ್ಷಿಸಿ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು.
ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ಸಂಸ್ಥೆಯ ಕಾರ್ಯಚಟವಟಿಕೆಗಳ ವಿವರ ನಿಡಿದರು.
ನಿವೃತ್ತ ಅಪರ ಜಿಲ್ಲಾಧಿಕಾರಿ ಎಸ್.ಎ.ಪ್ರಭಾಕರ ಶರ್ಮ , ರೆಡ್‌ಕ್ರಾಸ್ ಜಿಲ್ಲಾ ಘಟಕದ ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಡಾ.ಸಚ್ಚಿದಾನಂದ ರೈ, ಪುಷ್ಪರಾಜ್ ಜೈನ್, ಗುರುದತ್ ಕಾಮತ್, ಪಿ.ಬಿ.ಹರೀಶ್ ರೈ, ಸಿಬ್ಬಂದಿ ಮಲ್ಲಿಕಾ, ಅನಿತಾ, ಗಿರೀಶ್ ಕುಮಾರ್
ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top