ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಕೆವಿಎಎಫ್‌ಎಸ್‌ಯು ಆಡಳಿತ ಮಂಡಳಿಗೆ ನಾಮನಿರ್ದೇಶನ

117K Views 14 Jun 2025

ಬೆಂಗಳೂರು: ಮಂಗಳೂರಿನ ರೈಸನ್ ನ್ಯೂಟ್ರಿಷನ್‌ ಸಂಸ್ಥೆಯ ನಿರ್ದೇಶಕ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅವರನ್ನು ಕರ್ನಾಟಕ ಸರ್ಕಾರವು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ (ಕೆವಿಎಎಫ್‌ಎಸ್‌ಯು) ಆಡಳಿತ ಮಂಡಳಿಗೆ ನಾಮನಿರ್ದೇಶನ ಮಾಡಿದೆ. ಅವರ ಅಧಿಕಾರಾವಧಿ ಮುಂದಿನ ಮೂರು ವರ್ಷಗಳವರೆಗೆ ಇರುತ್ತದೆ.
ಡಾ. ಸುಶಾಂತ್‌ ರೈ ಅವರು ಪಶುವೈದ್ಯಕೀಯ ಮತ್ತು ಕಕ್ಕುಟೋದ್ಯಮದಲ್ಲಿ ಗುರುತಿಸಲ್ಪಟ್ಟ ಜನಪ್ರಿಯ ವ್ಯಕ್ತಿಯಾಗಿದ್ದಾರೆ. ಅವರು ಈ ಹಿಂದೆ 2019 ರಿಂದ 2024 ರವರೆಗೆ ಕರ್ನಾಟಕ ಕೋಳಿ ಸಾಕಣೆದಾರರ ಮತ್ತು ತಳಿಗಾರರ ಸಂಘದ (ಕೆಪಿಎಫ್‌ಬಿಎ) ಅಧ್ಯಕ್ಷರಾಗಿ ಸತತ ಎರಡು ಬಾರಿ ಸೇವೆ ಸಲ್ಲಿಸಿದ್ದಾರೆ. ಅವರು ಹೈದರಾಬಾದ್‌ನ ಐಸಿಎಆರ್-ಎನ್‌ಐಎಎನ್‌ಪಿ (ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಆ್ಯಂಡ್ ಫಿಸಿಯಾಲಜಿ) ಮತ್ತು ಐಸಿಎಆರ್-ಡಿಪಿಆರ್ (ಡೈರೆಕ್ಟರೇಟ್ ಆಫ್ ಪೌಲ್ಟ್ರಿ ರಿಸರ್ಚ್) ನ ಸಂಶೋಧನಾ ಸಲಹಾ ಸಮಿತಿಯ ಸದಸ್ಯರಾಗಿದ್ದಾರೆ. 2024 ರಲ್ಲಿ, ಅವರು ಕರ್ನಾಟಕದಿಂದ ಭಾರತೀಯ ಪಶುವೈದ್ಯಕೀಯ ಮಂಡಳಿಯ (ವಿಸಿಐ) ಆಡಳಿತ ಮಂಡಳಿಗೆ ಆಯ್ಕೆಯಾಗುವ ಮೂಲಕ ಉದ್ಯಮದಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಬಲ ಪಡಿಸಿದ್ದರು.
ತಮ್ಮ ದೂರದೃಷ್ಟಿಯ ನಾಯಕತ್ವ ಮತ್ತು ಸಹಯೋಗದ ಪ್ರಕ್ರಿಯೆಗೆ ಹೆಸರುವಾಸಿಯಾಗಿರುವ ಡಾ. ರೈ ಅವರು, ಸಂಸ್ಥೆಗಳನ್ನು ಪರಿಣಾಮಕಾರಿ ಬೆಳವಣಿಗೆಯತ್ತ ನಿರಂತರವಾಗಿ ಕೊಂಡೊಯ್ದಿದ್ದಾರೆ. ಕಷ್ಟಕರ ಪರಿಸ್ಥಿತಿಯಲ್ಲೂ ಸಂಯಮವನ್ನು ಕಾಯ್ದುಕೊಳ್ಳುವ ಹಾಗೂ ಸವಾಲುಗಳನ್ನು ಅಭಿವೃದ್ಧಿಯ ಅವಕಾಶಗಳಾಗಿ ಪರಿವರ್ತಿಸುವ ಅವರ ಸಾಮರ್ಥ್ಯಕ್ಕಾಗಿ ಅವರನ್ನು ಮೆಚ್ಚಲಾಗುತ್ತದೆ. KVAFSU ಮಂಡಳಿಗೆ ಅವರ ನಾಮನಿರ್ದೇಶನವು ರಾಜ್ಯದ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ಪರಿಸರ ವ್ಯವಸ್ಥೆಯನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆ ಎಂದೇ ಪರಿಗಣಿಸಲಾಗುತ್ತಿದೆ

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top