ಯೋಗಾಭ್ಯಾಸದಿಂದ ಚೇತೋಹಾರಿ ಜೀವನ-ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್. ಇಕ್ಬಾಲ್ ಕೆ.

106.4K Views 18 Jun 2025

ಮಂಗಳೂರು: ಬದಲಾದ ಜೀವನಶೈಲಿ ಹಾಗೂ ವೃತ್ತಿ ಬದುಕಿನ ಒತ್ತಡದಿಂದ ಹೆಚ್ಚಿನವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ.
ಇದನ್ನು ನಿವಾರಣೆ ಮಾಡಲು ಕೆಲಸ ಮಧ್ಯೆ ಒಂದಷ್ಟು ಹೊತ್ತು ಸರಳ ಯೋಗದ ಮೂಲಕ ವಿರಾಮ ಪಡೆಯಬೇಕು. ಇದರಿಂದ ಚೇತೋಹಾರಿಯಾಗಿ ಕೆಲಸ ಮಾಡಬಹುದೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್. ಇಕ್ಬಾಲ್ ಕೆ. ಹೇಳಿದರು.


ಮಂಗಳೂರು ಪ್ರೆಸ್ ಕ್ಲಬ್ ಮತ್ತು ದ.ಕ.ಜಿಲ್ಲಾ ಆಯುಷ್ ಇಲಾಖೆ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಜಿಲ್ಲೆಯ ಪತ್ರಕರ್ತರಿಗೆ ನಡೆದ ವಿರಾಮ ಯೋಗದ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜೂ.21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪೂರ್ವಭಾವಿಯಾಗಿ ಸಾರ್ವಜನಿಕರಿಗೆ ಯೋಗ ತರಬೇತಿ ನೀಡಲಾಗುತ್ತಿದೆ. ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲಿಯೇ ಕುಳಿತು ಮಾಡುವ ಯೋಗಾಸನ ಹಾಗೂ ಪ್ರಾಣಾಯಾಮದ ತರಬೇತಿಗಳನ್ನು ಆಯೋಜಿಸಲಾಗುತ್ತಿದೆ. ಯೋಗಾಭ್ಯಾಸದೊಂದಿಗೆ ಪರಿಸರ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಶಾರದಾ ನ್ಯಾಚುರೋಪತಿ ಕಾಲೇಜಿನ ಕಲಿಕಾ ವೈದ್ಯೆಯರಾದ ಗಾಯತ್ರಿ ಮತ್ತು ಸುಜಿತಾ ವಿರಾಮ ಯೋಗ ಪ್ರಾತ್ಯಕ್ಷಿಕೆ ನೀಡಿದರು.
ವೆನ್ಲಾಕ್ ಆಯುಷ್ ಆಸ್ಪತ್ರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ವೈದ್ಯಾಧಿಕಾರಿ ಡಾ.ಪ್ರಕಾಶ್.ಎ.ಜೆ. ಯೋಗ ಮತ್ತು
ಪ್ರಾಣಾಯಾಮದ ಬಗ್ಗೆ ಮಾಹಿತಿ ನೀಡಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಉಳ್ಳಾಲ ತಾಲೂಕು ಆಯುಷ್ ಘಟಕದ ಆಡಳಿತ ವೈದ್ಯಾಧಿಕಾರಿ ಡಾ.ಸಹನಾ ಪಿ., ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ , ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top