ಜೂ.26ರಂದು ರೆಡ್‌ಕ್ರಾಸ್‌ನಿಂದಮಾದಕ ದ್ರವ್ಯ ವಿರೋಧಿ ದಿನಾಚರಣೆ

101.6K Views 25 Jun 2025

ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ರಾಮಕೃಷ್ಣ ಕಾಲೇಜು ಸಹಯೋಗದಲ್ಲಿ ಜೂ.26ರಂದು ಮಧ್ಯಾಹ್ನ 3ಕ್ಕೆ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಕಳ್ಳ ಸಾಗಾಣೆ ವಿರೋಧಿ ದಿನಾಚರಣೆ ಬಂಟ್ಸ್ ಹಾಸ್ಟೆಲ್‌ನ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.
ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಫಾ.ಮುಲ್ಲರ್ ಮೆಡಿಕಲ್ ಕಾಲೇಜಿನ ಪ್ರೊ.ಡಾ.ಅರುಣ ಯಡಿಯಾಳ್, ಲೋಕಾಯುಕ್ತ ಡಿಎಸ್‌ಪಿ ಡಾ.ಗಾನ.ಪಿ.ಕುಮಾರ್ , ರಾಮಕೃಷ್ಣ ಕಾಲೇಜಿನ ಸಂಚಾಲಕ ಡಾ.ಸಂಜೀವ ರೈ, ಪ್ರಾಂಶುಪಾಲೆ ಡಾ.ಅನಸೂಯ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top