ಜೂ.27ರಂದು ಬೆಸೆಂಟ್ ಪ.ಪೂ.ಕಾಲೇಜಿನಲ್ಲಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

116.7K Views 25 Jun 2025

ಮಂಗಳೂರು: ಅಮೃತ ಪ್ರಕಾಶ ಹಾಗೂ ಬೆಸೆಂಟ್ ಪ.ಪೂ.ಕಾಲೇಜಿನ ವತಿಯಿಂದ ಜೂ.27ರಂದು ಮಧ್ಯಾಹ್ನ 2.30ಕ್ಕೆ
ಬೆಸೆಂಟ್ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ನಡೆಯಲಿದೆ.
ಕಾಲೇಜಿನ ಪ್ರಾಂಶುಪಾಲ ಡಾ.ನಾಯಕ್ ರೂಪಸಿಂಗ್ ಅಧ್ಯಕ್ಷತೆ ವಹಿಸಲಿದ್ದಾರೆ. ಜನಪದ ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್, ಲೇಖಕಿ ಡಾ. ಮೀನಾಕ್ಷಿ ರಾಮಚಂದ್ರ ಸಂಪನ್ಮೂಲ ವ್ಯಕ್ತಿಗಳಾಗಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ , ಜಾನಪದ ಪರಿಷತ್‌ನ ಜಿಲ್ಲಾಧ್ಯಕ್ಷ ಪಮ್ಮಿ ಕೊಡಿಯಾಲ್‌ಬೈಲ್ , ಯೋಗಗುರು ಜಗದೀಶ್ ಶೆಟ್ಟಿ ಬಿಜೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕಿ ಮಾಲತಿ ಶೆಟ್ಟಿ ಮಾಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top