ಬಂಟ್ವಾಳ: ಲಾರಿ ಮತ್ತು ದ್ವಿಚಕ್ರ ವಾಹನ ಅಪಘಾತ – ಸವಾರ ಸ್ಥಳದಲ್ಲೇ ಸಾವು.

119.6K Views 30 Jun 2025

ಬಂಟ್ವಾಳ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬಿ.ಸಿರೋಡಿನ ಅಜ್ಜಿಬೆಟ್ಟು ಕ್ರಾಸ್‌ನಲ್ಲಿ ಜೂ. 30ರಂದು ನಡೆದಿದೆ.
ಸ್ಕೂಟ‌ರ್ ಸವಾರ ಚಿದಾನಂದ ಅವರು ಬಿ.ಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್‌ನಲ್ಲಿ ಕ್ರಾಸ್ ಮಾಡುವ ವೇಳೆ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಚಕ್ರದಡಿ ಸಿಲುಕಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿದಾನಂದ ಅವರು ಬಂಟ್ವಾಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಯಾಗಿದ್ದಾರೆ. ಇವರಿಗೆ ಒಂದು ಹೆಣ್ಣು ಮತ್ತು ಗಂಡು ಮಗುವಿದೆ. ಪತ್ನಿ ಶಂಭೂರು ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬಿ ಸಿ ರೋಡ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top