ಮಂಗಳೂರು- ಹಿರಿಯ ಕಾಂಗ್ರೆಸ್ಸಿಗ, ಮಾಜಿ ಮುಖ್ಯಮಂತ್ರಿ ದೇವರಾಜು ಅರಸುರವರ ಆತ್ಮೀಯರಾಗಿದ್ಧ ಮುಲ್ಕಿ ಜಯಾನಂದ ದೇವಾಡಿಗರು ಜೂನ್ 30ರ ರಾತ್ರಿ ನಿಧನ ಹೊಂದಿದ್ದಾರೆ. ಅವರು ಸಮಸ್ತ ಹಿಂದುಳಿದ ವರ್ಗಗಳ ಪರವಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಯಶಸ್ವಿಯಾಗಿದ್ದರು,
ಆದರ್ಶ ಗಾಂಧಿವಾದಿ, ಅದ್ವಿತೀಯ ಸಂಘಟಕರು, ಕರಾವಳಿ ಭಾಗದಲ್ಲಿ ದೇವಾಡಿಗ ಸಂಘವನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ಧರು.
ದ.ಕ. ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳ ನೋಂದಾಯಿತ ಸಂಘ ಸಂಸ್ಥೆಗಳ ಒಕ್ಕೂಟವನ್ನು ರಚಿಸಿ ಅದರ ಮುಖೇನ ವಿವಿಧ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿದ್ದರು.
ಅವರಿಗೆ 92 ವರ್ಷ ವಯಸ್ಸಾಗಿತ್ತ. ಜಯಾನಂದ ದೇವಾಡಿಗರ ನಿಧನದಿಂದ ಹಿಂದುಳಿದ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ . ಅವರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಗಣ್ಯರನೇಕರು ಸಂತಾಪ ಸೂಚಿಸಿದ್ದಾರೆ








































































































































































































