ಪ್ರಿಯತಮೆಗೆ ಹಲ್ಲೆ ಮಾಡಿದ ಪ್ರೇಮಿ ನೇಣಿಗೆ ಶರಣು

107.7K Views 7 Jul 2025

ಬಂಟ್ವಾಳ: ಪ್ರೇಮಿಯೊಬ್ಬ ಪ್ರಿಯತಮೆಗೆ ಹಲ್ಲೆ ಮಾಡಿ ಬಳಿಕ ನೇಣಿಗೆ ಶರಣಾದ ಘಟನೆ ತಾಲೂಕಿನ ಪುದು ಗ್ರಾಮದ ಸುಜೀರು ದೈಯಡ್ಕ ಎಂಬಲ್ಲಿ ಸೋಮವಾರ ಮಧ್ಯಾಹ್ನದ ವೇಳೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಡ್ಮಾಣ್ ಗ್ರಾಮದ ಕಾಂಜೀಲಕೋಡಿ ನಿವಾಸಿ (30) ವರ್ಷದ ಸುಧೀರ್ ಎಂದು ಗುರುತಿಸಲಾಗಿದೆ.


ಗಂಭೀರವಾಗಿ ಗಾಯಗೊಂಡ ಯುವತಿ ದಿವ್ಯ ಯಾನೆ ದೀಕ್ಷಿತಾ(26) ಎಂಬಾಕೆಯನ್ನು ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇವರಿಬ್ಬರು ಕಳೆದ 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು ಕೆಲ ತಿಂಗಳುಗಳಿಂದ ಮನಸ್ತಾಪವಿದ್ದು, ಮದುವೆಗೆ ಒತ್ತಾಯಿಸುತಿದ್ದ ವೇಳೆ ಮಾತಿಗೆ ಮಾತು ಬೆಳೆದು ಯಾವುದೋ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಸುಧೀರ್ ದಿವ್ಯ ಮೇಲೆ ಮನಬಂದಂತೆ ಥಳಿಸಿದ್ದು, ಯುವತಿ ಸಾವನ್ನಪ್ಪಿದ್ದಾಳೆ ಎಂದು ಭಾವಿಸಿ ಆಕೆ ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ‌ ಎಂದು ತಿಳಿದು ಬಂದಿದೆ.
ಗಾಯಾಳು ದಿವ್ಯ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಯುವಕ ಸುಧೀರ್ ಈ ಹಿಂದೆ ಕೂಡ ಟವರ್ ಹತ್ತಿ ಈಕೆಯನ್ನು ಹೆದರಿಸಿದ್ದ ಅನ್ನುವ ಮಾಹಿತಿ ಇದೆ. ಸದ್ಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top