108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

98.7K Views 10 Jul 2025

ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಕೆನರಾ ಪದವಿ ಪೂರ್ವ ಕಾಲೇಜ್ ಜಂಟಿ ಆಶ್ರಯದಲ್ಲಿ 108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಕೆನರಾ ಪದವಿ ಕಾಲೇಜು ಸಭಾಂಗಣದಲ್ಲಿ ಜುಲೈ 4 ರಂದು ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಪದವಿ ಪೂರ್ವ ಕಾಲೇಜು ಮಂಗಳೂರು. ಡೀನ್ ಗೋಪಾಲಕೃಷ್ಣ ಶೆಟ್ಟಿ .ಕೆ .ಎಂ. ವಹಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಸಂಘದ ಉದ್ಘಾಟನೆಯು ನಡೆಯಿತು.

ಸಾಹಿತ್ಯ ಅಭಿರುಚಿ ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ಅತಿಥಿಯಾಗಿ ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕರಾದ ಬಿ. ರವೀಂದ್ರ ಶೆಟ್ಟಿ ಹಾಗೂ ಪ್ರಶಸ್ತಿ ವಿಜೇತ ಶಿಕ್ಷಕಿ, ಲೇಖಕಿ ಸುಧಾ ನಾಗೇಶ್ ಉತ್ತಮ ಮಾರ್ಗ ದರ್ಶನ ಮಾಹಿತಿ ನೀಡಿದರು. ಕೆನರಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲತಾ ಮಹೇಶ್ವರಿ ಕೆ.ಬಿ ಸಾಹಿತ್ಯ ಸಂಘದ ಮುಖ್ಯಸ್ಥರಾದ ಮಧುಕೇಶ್ವರ ಶಾಸ್ತ್ರಿ ಹಾಗೂ ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್. ವಿ ಗೌರವ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮಕೆ ಶುಭ ಹಾರೈಸಿದರು.ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸಿದರು. ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಪ್ರಾಸ್ತಾವಿಕವಾಗಿ ಮಾತಾಡಿ ಸ್ವಾಗತಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top