ಓದುವ ಹವ್ಯಾಸದಿಂದ ವ್ಯಕ್ತಿತ್ವ ವಿಕಸನ-ಡಾ.ಮೀನಾಕ್ಷಿ ರಾಮಚಂದ್ರ

109.8K Views 23 Jul 2025

ಮಂಗಳೂರು: ಪುಸ್ತಕ ಓದುವ ಹವ್ಯಾಸದಿಂದ ವ್ಯಕ್ತಿತ್ವ ಬೆಳವಣಿಗೆಯಾಗುತ್ತದೆ. ಅಪಾರ ಜ್ಞಾನ ಸಂಪತ್ತು ಪ್ರಾಪ್ತಿಯಾಗುತ್ತದೆ. ವಿದ್ಯಾರ್ಥಿಗಳು ಜ್ಞಾನ, ಬುದ್ಧಿ, ಮೌಲ್ಯದ ಕ್ರಿಯಾಶೀಲ ವಿಕಸನಕ್ಕಾಗಿ ಪಠ್ಯಕ್ರಮಗಳ ಓದಿನ ಜತೆಗೆ ಪೂರಕ ಪುಸ್ತಕಗಳನ್ನು ಓದುವುದು ಅವಶ್ಯವಾಗಿದೆ ಎಂದು ಸಾಹಿತಿ, ನಿವೃತ್ತ ಪ್ರಾಧ್ಯಾಪಕಿ ಡಾ.ಮೀನಾಕ್ಷಿ ರಾಮಚಂದ್ರ ಹೇಳಿದರು.
ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ದ.ಕ. ಜಿಲ್ಲಾ ಸಮಿತಿ ವತಿಯಿಂದ ನಗರದ ಶಾರದಾ
ವಿದ್ಯಾಲಯದ ಗ್ರಂಥಾಲಯಕ್ಕೆ ನೂರು ಪುಸ್ತಕಗಳ ಹಸ್ತಾಂತರ ಸಮಾರಂಭದಲ್ಲಿ ಅವರು ಓದಿನ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು.
ಓದು ದೈನಂದಿನ ಬದುಕಿನ ಒಂದು ಅಂಗವಾಗಬೇಕು. ವಿದ್ಯಾರ್ಥಿಗಳು ಮೊಬೈಲ್‌ನಿಂದ ದೂರವಿದ್ದು ಪುಸ್ತಕ ಓದಲು ಸಮಯ ಮೀಸಲಿರಿಸಬೇಕು ಎಂದು ಅವರು ಹೇಳಿದರು.
ಶಾರದಾ ವಿದ್ಯಾಲಯದ ಪ್ರಾಂಶುಪಾಲ ದಯಾನಂದ ಕಟೀಲ್ ಮಾತನಾಡಿ ‘ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದ
ಉಪಯುಕ್ತ ಪುಸ್ತಕಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡುವ ಮೂಲಕ ಸದ್ವಿನಿಯೋಗ ಪಡಿಸಿಕೊಳ್ಳಬೇಕು ಎಂದರು.
ಅಭಾಸಾಪ ದ.ಕ.ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ಉದ್ಘಾಟಿಸಿದರು. ಶಾರದಾ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಚಂದ್ರಿಕಾ ಭಂಡಾರಿ, ಉಪ ಪ್ರಾಂಶುಪಾಲೆ ಲಕ್ಷ್ಮೀ ಉಡುಪ, ಸಹಾಯಕ ಪ್ರಾಂಶುಪಾಲೆ ಲಕ್ಷ್ಮೀ ಪೈ, ಯಕ್ಷಾರಾಧನಾ ಕಲಾ ಕೇಂದ್ರದ ನಿರ್ದೇಶಕ ರತ್ನಾಕರ್ ರಾವ್, ಅಭಾಸಾಪ ಜಿಲ್ಲಾ ಖಜಾಂಜಿ ಭಾಸ್ಕರ ರೈ ಕಟ್ಟ, ಸಾಹಿತ್ಯ ಕೂಟ ಪ್ರಮುಖ್ ಗೀತಾ ಲಕ್ಷ್ಮೀಶ್ ,ಸಮಿತಿ ಸದಸ್ಯ ಡಾ.ಸುರೇಶ್ ನೆಗಳಗುಳಿ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ್ ರಾವ್ ಕಾರ್ಯಕ್ರಮ ನಿರೂಪಿಸಿದರು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top