ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಇಂದು ರಕ್ಷಾ ಬಂಧನ ಆಚರಣೆ

113.2K Views 9 Aug 2025

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಇಂದು ರಕ್ಷಾ ಬಂಧನ ದಿನದ ಪ್ರಯುಕ್ತ ಭಾರತೀಯ ಸೇನೆ ಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿ ಈಗ ನಿವೃತ್ತಿಯಲ್ಲಿರುವ ನಮ್ಮ ಸಹೋದರ ಭಾಂದವರಿಗೆ ರಕ್ಷೆಯನ್ನು ಕಟ್ಟಿ, ಸಿಂದೂರ ತಿಲಕ ಇಟ್ಟು, ಆರತಿ ಬೆಳಗಿ, ರಕ್ಷೆ ಕಟ್ಟಿ, ಉಗ್ರರ ದಾಳಿಗೆ ಸಿಂದೂರ ವನ್ನು ಕಳಕೊಂಡ ನೋವಿಗೆ ಆಪರೇಷನ್ ಸಿಂದೂರದ ಮೂಲಕ ಪ್ರತ್ಯುತ್ತರ ನೀಡಿರುವ ನಮ್ಮ ಸೇನೆಯ ವೀರರಿಗೆ ಧನ್ಯವಾದ ಹೇಳುವ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಈ ಕಾರ್ಯಕ್ರಮ ದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ದ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಮಹಿಳಾ ಮೋರ್ಚಾದ ಪ್ರಭಾರಿ ಸಂಧ್ಯಾ ವೆಂಕಟೇಶ್, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಕಮಲಾಕ್ಷಿ ಗಂಗಾಧರ್, ಶಬರಿ ಶೆಟ್ಟಿ, ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಗೀತಾ, ಪೂಜಾ,ಜ್ಯೋತಿ ಯಲಬುರ್ಗಿ, ಸೌಮ್ಯ ಆಚಾರ್ಯ, ವೀಣಾ ಕುಲಾಲ್, ಪೂರ್ಣಿಮಾ ಶೆಟ್ಟಿ, ಚೇತನ, ಮದಲಾಕ್ಷಿ. ಉಪಸ್ಥಿತರಿದ್ದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top