ಆ.23ರಂದು ಡಾ.ಎಂ.ಮೋಹನ ಆಳ್ವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ’ ಅವಾರ್ಡ್

107.8K Views 19 Aug 2025

ಮಂಗಳೂರು : ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆ.23ರಂದು ನಗರದ ಎ.ಜೆ.ಗ್ರಾೃಂಡ್ ಹೋಟೆಲ್‌ನಲ್ಲಿ ನಡೆಯಲಿದೆ. ಬೆಳಗ್ಗೆ 11ಕ್ಕೆ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್‌ನ ಚೇರ್ಮನ್ ಡಾ.ಎಂ.ಮೋಹನ ಆಳ್ವ ಅವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ’ ಪ್ರದಾನ ಮಾಡಲಾಗುವುದು.
ಹಿರಿಯ ಯಕ್ಷಗಾನ ಕಲಾವಿದ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಅವರಿಗೆ ದಿ.ಡಾ.ಡಿ.ಕೆ.ಚೌಟ ದತ್ತಿನಿಧಿ ಪ್ರಶಸ್ತಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಇಂದಿರಾ ಶೆಟ್ಟಿ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ 24ನೇ ರ‌್ಯಾಂಕ್ ಪಡೆದ ಸಿಎ ನಿಶ್ಚಲ್ ರೈ ಅವರಿಗೆ ಸಿಎ ವೈ.ಆರ್.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ಹಾಗೂ ಸಿಎ ರಕ್ಷಾ. ಆರ್.ಶೆಟ್ಟಿ ಅವರಿಗೆ ಸಿಎ ಗೋಪಾಲ್.ಬಿ.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ವಿತರಿಸಲಾಗುವುದೆಂದು ವಿಶ್ವ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top