ಆ.26ರಂದು ದೇವ್‌ದಾಸ್ ಕಾಪಿಕಾಡ್ ಪ್ರೆಸ್ ಕ್ಲಬ್ ಗೌರವ ಅತಿಥಿ

104.7K Views 22 Aug 2025

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಆ.26ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ
ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ನಟ, ನಿರ್ದೇಶಕ ದೇವದಾಸ ಕಾಪಿಕಾಡ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಶ್ರೀನಿವಾಸ ವಿ.ವಿ.ಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸುಶ್ಮಿತಾ.ಎಸ್.ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top