ಡಾ.ಎಂ.ಮೋಹನ ಆಳ್ವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ’ ಅವಾರ್ಡ್. ‘ಸಾಮರಸ್ಯದ ಮನೋಭಾವನೆಯಿಂದ ಬದುಕಿಗೆ ಶಕ್ತಿ’-ಡಾ.ಎಂ.ಮೋಹನ ಆಳ್ವ

107K Views 23 Aug 2025

ಮಂಗಳೂರು: ಎಲ್ಲ ಜಾತಿ, ಮತ, ಧರ್ಮದವರನ್ನು ಗೌರವಿಸುವ ಸಾಮರಸ್ಯದ ಮನೋಭಾವನೆ ಬೆಳೆಸಿಕೊಂಡಿರುವುದೇ ಇಂದು ಬದುಕಿಗೆ ಶಕ್ತಿ ತುಂಬಿದೆ. ಉತ್ತಮ ಸಂಸ್ಕಾರದ ಜತೆಗೆ ಸಾಮರ್ಥ್ಯ ಅರಿತು ದುಡಿದ ಪರಿಣಾಮ ಬದುಕಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದು ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್‌ನ ಚೇರ್ಮನ್ ಡಾ.ಎಂ.ಮೋಹನ ಆಳ್ವ ಹೇಳಿದರು.
ನಗರದ ಎ.ಜೆ.ಗ್ರಾೃಂಡ್ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ಸ್ವೀಕರಿಸಿ ಅವರು ಮಾತನಾಡಿದರು.
ಬಾಲ್ಯದಿಂದಲೇ ಕಲೆ ಮತ್ತು ಕ್ರೀಡೆಯಲ್ಲಿ ಆಸಕ್ತಿ ಹೊಂದಿದೆ. ಸಾಂಸ್ಕೃತಿಕ ಕ್ಷೇತ್ರ ಬದುಕಿಗೆ ಒಳ್ಳೆಯ ಮೌಲ್ಯಗಳನ್ನು ನೀಡಿದರೆ,
ಕ್ರೀಡೆಯ ಮೇಲಿನ ಆಸಕ್ತಿ ಹೋರಾಟದ ಮನೋಭಾವನೆ ಬೆಳೆಸಿಕೊಳ್ಳಲು ಸಹಕಾರಿಯಾಯಿತು ಎಂದು ಡಾ.ಆಳ್ವ ಹೇಳಿದರು.
ಮುಖ್ಯ ಅತಿಥಿಯಾಗಿದ್ದ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಡಾ.ಎಂ.ಶಾಂತಾರಾಮ ಶೆಟ್ಟಿ ಮಾತನಾಡಿ ‘ ಡಾ.ಎಂ.ಮೋಹನ ಆಳ್ವ ಅವರ
ಸಾಧನೆ ಬಂಟ ಸಮಾಜಕ್ಕೆ ಪ್ರೇರಣಾ ಶಕ್ತಿಯಾಗಿದೆ’ ಎಂದರು.
ಹಿರಿಯ ಯಕ್ಷಗಾನ ಕಲಾವಿದ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಅವರಿಗೆ ದಿ.ಡಾ.ಡಿ.ಕೆ.ಚೌಟ ದತ್ತಿನಿಧಿ ಪ್ರಶಸ್ತಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಇಂದಿರಾ ಶೆಟ್ಟಿ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ 24ನೇ ರ‌್ಯಾಂಕ್ ಪಡೆದ ಸಿಎ ನಿಶ್ಚಲ್ ರೈ ಅವರಿಗೆ ಸಿಎ ವೈ.ಆರ್.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ಹಾಗೂ ಸಿಎ ರಕ್ಷಾ. ಆರ್.ಶೆಟ್ಟಿ ಅವರಿಗೆ ಸಿಎ ಗೋಪಾಲ್.ಬಿ.ಶೆಟ್ಟಿ
ದತ್ತಿನಿಧಿ ಪ್ರಶಸ್ತಿ ವಿತರಿಸಲಾಯಿತು.
ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ , ಉಪಾಧ್ಯಕ್ಷ ಕೆ.ಎಸ್.ಹೆಗ್ಡೆ, ಯೋಜನಾ ನಿರ್ದೇಶಕ ಡಾ.ಬಿ. ಸಂಜೀವ ರೈ, ಖಜಾಂಚಿ ಸಿಎ ಸುದೇಶ್ ಕುಮಾರ್ ರೈ , ಮೀನಾಕ್ಷಿ ಆಳ್ವ ಉಪಸ್ಥಿತರಿದ್ದರು. ಪಳ್ಳಿ ಕಿಶನ್ ಹೆಗ್ಡೆ , ಕೆ.ಎಂ.ಶೆಟ್ಟಿ ಮತ್ತು ಜ್ಯೋತಿ ಪ್ರಸಾದ್ ಹೆಗ್ಡೆ ಸನ್ಮಾನಿತರನ್ನು ಪರಿಚಯಿಸಿದರು. ಜೈರಾಜ್.ಬಿ.ರೈ ವಂದಿಸಿದರು. ಕಳ್ಳಿಗೆ ತಾರನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top