ಮಣಿಯಂಪಾರೆ ಚರ್ಚ್ ನಲ್ಲಿ ಮೊಂತಿ ಹಬ್ಬದ ನೊವೇನಾ ಪ್ರಾರ್ಥನೆ ಆರಂಭ

114.4K Views 5 Sep 2025

ಕಾಸರಗೋಡು: ಕಾಸರಗೋಡು ಜಿಲ್ಲೆಯ ಮಣಿಯಂಪಾರೆ ಸಂತ ಲಾರೆನ್ಸ್ ಚರ್ಚ್ ನಲ್ಲಿ ಸೆಪ್ಟೆಂಬರ್ 8 ರಂದು ನಡೆಯಲಿರುವ ಮೊಂತಿ ಹಬ್ಬದ ಪೂರ್ವ ಭಾವಿಯಾಗಿ 9 ದಿನಗಳ ನೊವೇನಾ ಪ್ರಾರ್ಥನೆ ಆಗಸ್ಟ್ 30 ರಂದು ಆರಂಭಗೊಂಡಿದೆ.
ಚರ್ಚಿನ ಧರ್ಮಗುರು ವಂದನೀಯ ಫಾ. ನೆಲ್ಸನ್ ದಲ್ಮೆಡಾ ಅವರ ನೊವೇನಾ ಪ್ರಾರ್ಥನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮೇರಿ ಮಾತೆ ಕೇವಲ ಯೇಸು ಕ್ರಿಸ್ತರ ತಾಯಿ ಆಗಿರದೆ ನಮ್ಮೆಲ್ಲರ ತಾಯಿ ಆಗಿದ್ದಾರೆ.
ಅವರಿಗೆ ಗೌರವ ನಮನ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು. ಚರ್ಚ್ ಉಪಾಧ್ಯಕ್ಷ ವಿಲ್ಸನ್ ಡಿ ಸೋಜಾ ಉಪಸ್ಥಿತರಿದ್ದರು.
ಚರ್ಚಿನ ಮಕ್ಕಳು ಮತ್ತು ಭಕ್ತರು ಮೇರಿ ಮಾತೆಗೆ ಹೂವುಗಳನ್ನು ಅರ್ಪಿಸಿ ಗೌರವ ಸಲ್ಲಿಸಿ ಪ್ರಾರ್ಥಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top