ಬಂಟರ ಸಂಘ ಬಂಟ್ವಾಳ ತಾಲೂಕು ಇದರ ಮಹಿಳಾ ಘಟಕದ ಅಧ್ಯಕ್ಷರಾಗಿ ಸುಜಾತಾ ಪಿ. ರೈ ಆಯ್ಕೆ

114.3K Views 7 Sep 2025

ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು‌ ಇದರ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಸುಜಾತ ಪಿ.ರೈ ಕಲ್ಲಡ್ಕ ಅವರು ಗೆಲುವು ಸಾಧಿಸಿದ್ದಾರೆ.
ಬಂಟ್ವಾಳ ಮಹಿಳಾ ಬಂಟರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸುಜಾತ ಪಿ.ರೈ ಹಾಗೂ ಸಂಧ್ಯಾರೈ ಬೆಳ್ಳೂರು ಅವರ ನಡುವೆ ಪ್ರಬಲ ಪೈಪೋಟಿ ನಡೆದಿದ್ದು,ಕೊನೆಗೆ ಚುನಾವಣೆಯ ಮೂಲಕ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು.
ಸುಜಾತ ಪಿ.ರೈ ಅವರು ಅಭೂತಪೂರ್ವ ಗೆಲುವು ಸಾಧಿಸಿ ನೂತನ ಅಧ್ಯಕ್ಷರಾಗಿ‌ ಆಯ್ಕೆಯಾಗಿದ್ದಾರೆ.
ಈ ಹಿಂದೆ‌ ಇವರು‌ ಸಮಿತಿಯ ಕೋಶಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಉಳಿದಂತೆ ಉಪಾಧ್ಯಕ್ಷ ರಾಗಿ ಜ್ಯೋತಿ ರೈ ಮಾಣಿ,ಕಾರ್ಯದರ್ಶಿಯಾಗಿ ಮಂದಾರತಿ ಶೆಟ್ಟಿ ಸಿದ್ದಕಟ್ಟೆ ಹಾಗೂ ಕೋಶಾಧಿಕಾರಿಯಾಗಿ ರೂಪ‌ಅರಳ ,ಜತೆ ಕೋಶಾಧಿಕಾರಿಯಾಗಿ ಶೋಭಾ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top