ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರ ವಹಿಸಲು ಕರೆ

106.2K Views 20 Sep 2025

ಮಂಗಳೂರು,ಮಕ್ಕಳ ಆರೋಗ್ಯದ ಕುರಿತು ಪೋಷಕರು ಹೆಚ್ಚಿನ ಗಮನ ಹಾಗೂ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಶಾಲೆಯಲ್ಲಿ ನಡೆದ ಪೋಷಣಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೆ ಎಂ ಸಿ ಆಸ್ಪತ್ರೆಯ ಡಾ ಶರಾವತಿ ಹಾಗೂ ಡಾ. ಎಲ್ಸ್ ಷಾ ಮಾಹಿತಿ ನೀಡಿದರು. ಶಾಲಾ ಮುಖ್ಯ ಗುರು ಲೀನಾ, ಸಿಆರ್ಪಿ ವಿನೋದ ಅಮೀನ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಸವಿತಾ, ಆರೋಗ್ಯ ಸಹಾಯಕಿಯರಾದ ಸುಮಿತ್ರಾ, ಭಾರತಿ, ಅಂಗನವಾಡಿ ಶಿಕ್ಷಕಿ ನಂದಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top