ದ. ಕ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ನಿ.ಬಿ.ಸಿರೋಡ್ ಇದರ ವಾರ್ಷಿಕ ಮಹಾ ಸಭೆ

110.5K Views 22 Sep 2025

ದ. ಕ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ನಿ.ಬಿ.ಸಿರೋಡ್ ಇದರ 2024-2025 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ದಿನಾಂಕ 20-09 ರಂದು ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಜರಗಿತು.
ಮಹಾಮಂಡಲ ದ ಅಧ್ಯಕ್ಷರು ಕೆ ಸಂಜೀವ ಪೂಜಾರಿ ಅವರು ಅಧ್ಯಕ್ಷತೆ ವಹಿಸಿ ವಾರ್ಷಿಕ ವರದಿಯನ್ನು ಮಂಡಿಸಿ ಮಹಾಮಂಡಲವು 10.ಕೋಟಿ ರೂ ಠೇವಣಿ ಸಂಗ್ರಹಿಸಿದ್ದು 5.50 ಕೋಟಿ ಸಾಲ ನೀಡಿದ್ದು 5 ಕೋಟಿ ರೂ ಹೂಡಿಕೆ ಮಾಡಿದ್ದು ಪ್ರಸ್ತುತ ಸಾಲಿನಲ್ಲಿ 10.28 ಲಕ್ಷ ರೂ ನಿವ್ವಳ ಲಾಭಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 31 ಮೂರ್ತೆದಾರರ ಸಹಕಾರಿ ಸಂಘಗಳು ಇದ್ದು ಇದರಲ್ಲಿ ಈಗಾಗಲೇ 18 ಪ್ರಾಥಮಿಕ ಮೂರ್ತೆದಾರರ ಸಹಕಾರಿ ಸಂಘಗಳು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ತೊಡಗಿದ್ದು ಸುಮಾರು 1000 ಕೋಟಿ ರೂ ವ್ಯವಹಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದೆ ಎಂದರು..
ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆ ದಾರರ ಮಹಾಮಂಡಲದ ವತಿಯಿಂದ ನೀಡುವ ಅತುತ್ತಮ ಮೂರ್ತೆದಾರರ ಸಹಕಾರಿ ಸಂಘ ಪ್ರಶಸ್ತಿ ಯನ್ನು ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಹಾಗೂ ಅಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘಗಳಿಗೆ ನೀಡಿ ಸನ್ಮಾನಿಸಲಾಯಿತು.
ಆಗಮಿಸಿದ ಎಲ್ಲಾ ಪ್ರಾಥಮಿಕ ಮೂರ್ತೆ ದಾರರ ಸೇವಾ ಸಹಕಾರಿ ಸಂಘಗಳಿಗೆ ಗೌರವ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಉಪಾಧ್ಯಕರಾದ ರಾಜೇಶ್ ಸುವರ್ಣ, ನಿರ್ದೇಶಕರಾದ ವಿಜಯ ಕುಮಾರ್ ಸೊರಕೆ, ಆರ್. ಸಿ. ನಾರಾಯಣ್ ರೆಂಜ, ಪುರುಷ ಎನ್ ಸಾಲಿಯಾನ್, ಅಣ್ಣಿ ಯಾನೆ ನೊಣಯ್ಯಾ, ವಿಶ್ವನಾಥ ಪೂಜಾರಿ ಪಂಜ, ಬೇಬಿ ಕುಂದರ್, ವಿಶ್ವನಾಥ ಬಿ. ಶಿವಪ್ಪ ಸುವರ್ಣ, ಪದ್ಮನಾಭ ಕೋಟ್ಯಾನ್, ಹರೀಶ್ ಸುವರ್ಣ, ಗಣೇಶ್ ಪೂಜಾರಿ, ಉಪಸ್ಥಿತರಿದ್ದರು.
ನಿರ್ದೇಶಕರಾದ ಉಷಾ ಅಂಚನ್ ಸ್ವಾಗತಿಸಿ, ಸಿ. ಇ. ಒ ಕಿಶೋರ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಶೈಲಜಾ ಕೆ ಇವರು ವಂದಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top