ಮಂಗಳೂರು : ಕರ್ನಾಟಕ ಸರಕಾರವು ರಾಜ್ಯದಲ್ಲಿ ಕನ್ನಡ ಅಭಿವೃದ್ಧಿಗಾಗಿ ಹಾಕಿಕೊಂಡಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುಕೂಲವಾಗುವಂತೆ ರಾಜ್ಯದ ಪ್ರತಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಜಾಗೃತಿ ಸಮಿತಿಯನ್ನು ರಚಿಸಿದ್ದು , ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಮಹಾನಗರ ಪಾಲಿಕಾ ವ್ಯಾಪ್ತಿಗೆ ಸಂಬಂಧಿಸಿದಂತೆ ಒಟ್ಟು 6 ಮಂದಿ ಸದಸ್ಯರನ್ನು ನಾಮನಿರ್ದೇಶನ ಮಾಡಿರುತ್ತದೆ. ಇವರಲ್ಲಿ ಡಾ.ರಾಜೇಶ್ ಕದ್ರಿ ಕೂಡ ಒಬ್ಬರು.
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಇವರು ಪತ್ರಕರ್ತ,
ಪತ್ರಿಕೋದ್ಯಮಿಯಾಗಿದ್ದು,ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲೂ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡು ಬಂದಿರುತ್ತಾರೆ.









































































































































































































